
ಶಹಾಪುರ: ನಗರ ಸಮೀಪದ ಭೀಮರಾಯನಗುಡಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಭೀಗುಡಿ ವಲಯ ಕಸಾಪ ಅಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಭಾನುವಾರ ಸಭೆ ನಡೆಯಲಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಡಾ.ರವೀಂದ್ರನಾಥ ಹೊಸ್ಮನಿ ತಿಳಿಸಿದ್ದಾರೆ.
ಈಗಾಗಲೇ ಐದು ವಲಯಗಳಲ್ಲಿ ಅಧ್ಯಕ್ಷ ಸೇರಿ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಭೀಗುಡಿ ಆರನೇ ವಲಯವಾಗಿ ಉದಯವಾಗಲಿದ್ದು, ನಾಗನಟಗಿ, ಸೈದಾಪುರ, ಭೀಗುಡಿ ಸೇರಿ ಈ ವಲಯ ವ್ಯಾಪ್ತಿಯ ಗ್ರಾಮೀಣ ಪ್ರದೇಶದ ಸಾಹಿತಿಗಳು, ಸಾಹಿತ್ಯ ಆಸಕ್ತರು, ನಾಡ-ನುಡಿ ಸೇವಕರು ಆಯ್ಕೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
