
ಕಲಬುರಗಿ: ನಗರದ ಹೈದ್ರಾಬಾದ್ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ರಾ.ಸೇ.ಯೋ. ,ರಾಜ್ಯಶಾಸ್ತ್ರ ಹಾಗೂ ಚುನಾವಣಾ ಸಾಕ್ಷರತಾ ಕ್ಲಬ್ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಯೋಜಿಸಲಾಗಿತ್ತು ,ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಚು.ಸಾ.ಕ್ಲಬ್ ನ ಸಂಚಾಲಕರಾ ಶ್ರೀಮತಿ ಗೀತಾ ಪಾಟೀಲ್ ಇವರು ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಮತದಾನದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ,ಹಾಗೂ ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ನಾಗೇಂದ್ರ ಮಸೂತಿ ಹಾಗೂ ಎರಡು ಮಹಾವಿದ್ಯಾಲಯಗಳ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗದವರು, ಮತ್ತು ವಿದ್ಯಾರ್ಥಿನಿಯರು ಭಾಗವಹಿಸಿದ್ದರು ಎಂದು ರಾ.ಸೇ.ಯೋ.”ಬ” ಘಟಕದ ಕಾರ್ಯಕ್ರಮಾಧಿಕಾರಿಗಳಾದ ಡಾ.ಮಹೇಶ ಗಂವ್ಹಾರ ಅವರು ತಿಳಿಸಿದ್ದಾರೆ.
