
ಸೆಕ್ಯುಲರ್ ವಾಯ್ಸ್ ಶಹಾಪುರ
ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಬಾಲಕರ ವಸತಿ ನಿಲಯದ ಅವ್ಯವಸ್ಥೆಯ ವಿರುದ್ಧ ವಸತಿ ನಿಲಯದ ವಿದ್ಯಾರ್ಥಿಗಳು ಇಂದು ವಸತಿ ನಿಲಯದಲ್ಲಿಯೇ ದಿಡೀರ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು, ವಿದ್ಯಾರ್ಥಿಗಳ ಮನವಿಯನ್ನು ಆಲಿಸಿದರು. ವಸತಿ ನಿಲಯದಲ್ಲಿ ಸ್ವಚ್ಛತೆ ಮರಿಚಿಕೆ
ಯಾಗಿದೆ. ಪ್ರಸ್ತುತ ಡೆಂಘೀ ಜ್ವರದ ಹಾವಳಿ ಹೆಚ್ಚಾಗಿರುವುದರಿಂದ ರಾತ್ರಿ ಸೊಳ್ಳೆ ಕಾಟಗಳ ಕಾಟ. ಇಲ್ಲಿನ ಶೌಚಾಲಯ ಮತ್ತು ಸ್ನಾನದ ಕೋಣೆಗಳು ಸ್ವಚ್ಛತೆ ಇಲ್ಲದೆ ಇರುವುದು, ಕೋಣೆಗಳ ಬಾಗಿಲು ಮತ್ತು ಕಿಟಕಿಗಳು ಮುರಿದಿರುವುದು ಸೇರಿದಂತೆ ಇತರ ಸಮಸ್ಯೆಗಳ ಬಗ್ಗೆ ತಿಳಿಸಿದರು. ಸುಮಾರು ತಿಂಗಳುಗಳಿಂದ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ರಾಹುತಪ್ಪನವರಿಗೆ ಹೇಳಿದ್ದರೂ ಕೂಡ ಸ್ಪಂದಿಸಿಲ್ಲ. ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ನಮಗೆ ಸ್ಪಂದಿಸದ ತಾಲೂಕು ಅಧಿಕಾರಿಯನ್ನು ಅಮಾನತು ಮಾಡಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ವಿದ್ಯಾರ್ಥಿಗಳು ಮನವಿ ಮಾಡಿದರು.ಸರ್ ಎಂ ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರಾದ ಪ್ರದೀಪ್ ಅಣಬಿ, ಮಹೇಂದ್ರ ಪ್ರಸಾದ್, ರಾಮು, ಆಕಾಶ, ಭೀಮರಾಯ, ಮಂಜುನಾಥ, ದೇವರಾಜ ಸೇರಿದಂತೆ ವಸತಿ ನಿಲಯದ ವಿದ್ಯಾರ್ಥಿಗಳು ಇದ್ದರು.
