ಪತ್ರಕರ್ತ ಪ್ರಕಾಶ ದೊರೆಗೆ ವಾರ್ಷಿಕ ಪ್ರಶಸ್ತಿ ಪ್ರದಾನ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಕಲಬುರಗಿ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಯನ್ನು ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಪತ್ರಕರ್ತ ಪ್ರಕಾಶ ದೊರೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರು ಕಲಬುರಗಿಯಲ್ಲಿ ಪ್ರಶಸ್ತಿ ಪ್ರದಾನ‌ ಮಾಡಿದರು.
ಇದೇ ಸಂದರ್ಭದಲ್ಲಿ ಇನ್ನೂ ಸಾಧಕ‌ ಪತ್ರಕರ್ತರಿಗೂ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪತ್ರಕರ್ತ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಸಂಸದ ರಾಧಾಕೃಷ್ಣ ಸೇರಿ ಹಲವು ರಾಜಕೀಯ ಗಣ್ಯರು, ಹಿರಿಯ, ಕಿರಿಯ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.