
ಸೆಕ್ಯುಲರ್ ವಾಯ್ಸ್ ನ್ಯೂಸ್ ಕಲಬುರಗಿ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರಾಗಿ ಪರಿಶಿಷ್ಟ ಪಂಗಡದ ಅಭ್ಯರ್ಥಿಯಾಗಿ ಯಲ್ಲಪ್ಪ ಎಸ್ ನಾಯ್ಕೋಡಿ ಹಾಗೂ ಪೂಜ್ಯ ಉಪ ಮಹಾಪೌರರಾದ ಬಿಸಿಎ ವರ್ಗಕ್ಕೆ ಮೀಸಲಾಗಿರುವ ಅಭ್ಯರ್ಥಿಯಾಗಿ ಹೀನಾ ಬೇಗಂ ಅವರು ಮಂಗಳವಾರದಂದು ಕಲಬುರಗಿ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೇಷ್ಮೆ ಅಭಿವೃದ್ಧಿ ನಿಯಮತದ ಅಧ್ಯಕ್ಷೆ ಕನೀಜ್ ಫಾತಿಮಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಅಲಂಖಾನ್, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ್ ದೇವಿದಾಸ ಸಭಾ ಕಾರ್ಯದರ್ಶಿ ಮಲ್ಲೇಶ ತಂಗಾ ಸೇರಿದಂತೆ ಪಾಲಿಕೆ ಸದಸ್ಯರು ಅಧಿಕಾರಿಗಳು ಗಣ್ಯ ವ್ಯಕ್ತಿಗಳು ಅನೇಕ ಜನರು ಉಪಸ್ಥಿತರಿದ್ದರು.
