
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ತಾಲೂಕಿನ ಹತ್ತಿಗುಡೂರು ಗ್ರಾಮದ ಚಂದ್ರಶೇಖರ ತಂದೆ ಮಹಾದೇವಪ್ಪ ನಾಟೇಕರ ಇವರನ್ನು ಶಹಾಪುರ ತಾಲೂಕಿನ ಪರಿಶಿಷ್ಟ ಜಾತಿ ವಿಭಾಗದ ಕಾರ್ಯಕಾರಣಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ ಹಾಗೂ ಯಾದಗಿರಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ನೀಲಕಂಠ ಬಡಿಗೇರ ಅವರ ಆದೇಶದ ಮೇರೆಗೆ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ಜವಾಬ್ದಾರಿಯನ್ನು ವಹಿಸಲಾಗಿದೆ.
ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಜೊತೆಗೆ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು,ಸಂಘಟನೆಯಲ್ಲಿ ತೊಡಗಲು ಆದೇಶ ನೀಡಲಾಗಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶಂಕ್ರಣ್ಣ ವಣಿಕ್ಯಾಳ, ಭೀಮಣ್ಣ ಕಾಂಗ್ರೆಸ್ ಶಾಂತಪ್ಪ ಕಟ್ಟಿಮನಿ, ಮಲ್ಲಣ್ಣ ಗೋಗಿ, ಶೇಖಪ್ಪ ಹೊಸಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
