
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ನಗರ ಮತ್ತು ಪಟ್ಟಣಗಳಲ್ಲಿರುವ ಖಾಸಗಿ ಕಾನ್ವೆಂಟ್ ಸ್ಕೂಲ್ ಗಳಿಗೆ ಸೆಡ್ಡು ಹೊಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ,ಗ್ರಾಮೀಣ ಭಾಗದ ಪ್ರತಿಯೊಂದು ಮಗುವಿಗೂ ಆಂಗ್ಲ ಮತ್ತು ಕನ್ನಡ ಮಾಧ್ಯಮದಲ್ಲಿ ಉತ್ತಮ ಶಿಕ್ಷಣ ಸಿಗಬೇಕೆಂಬ ಸದುದ್ದೇಶದಿಂದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಪ್ರಾರಂಭಿಸಿದೆ.ಆದರೆ ಇಲ್ಲಿ ವಿಪರ್ಯಾಸವೆಂದರೆ,ವಿಷಯವಾರು ಶಿಕ್ಷಕರ ಕೊರತೆ ಎದುರಾಗಿದೆ,
ಈ ಶಾಲೆಯಲ್ಲಿ ಒಟ್ಟು 252 ಕ್ಕೂ ಹೆಚ್ಚು ವಿದ್ಯಾರ್ಥಿಗಳು 1 ರಿಂದ 6 ನೇ ತರಗತಿವರೆಗೆ ಹಾಗೂ ಎಲ್ಕೆಜಿ ಮತ್ತು ಯುಕೆಜಿಯಲ್ಲಿ 60 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು,ಈ ಶಾಲೆಗೆ ಒಟ್ಟು ಏಳು ಜನ ಖಾಯಂ ಶಿಕ್ಷಕರನ್ನು ಸರ್ಕಾರ ನೇಮಕ ಮಾಡಬೇಕಿತ್ತು,ಆದರೆ ಕೇವಲ ಒಬ್ಬರನ್ನು ಖಾಯಂ ಶಿಕ್ಷಕರನ್ನಾಗಿ ನೇಮಕ ಮಾಡಿ ಇನ್ನುಳಿದ ಆರು ಜನ ಅತಿಥಿ ಶಿಕ್ಷಕರನ್ನಾಗಿ ನೇಮಕ ಮಾಡಿ ತೊಳೆದುಕೊಳ್ಳಲಾಗಿದೆ.ಭಾಷಾ ಹಾಗೂ ವಿಷಯವಾರು ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಕುಂಠಿತವಾಗುತ್ತಿದೆ. ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಮಸ್ಯೆ ಕಳೆದೆರಡು ವರ್ಷಗಳಿಂದಲೂ ಇದೇ ರೀತಿ ನಡೆಯುತ್ತಾ ಬಂದಿದೆ.ಇದರಿಂದ ಹಲವು ಪಾಲಕರು ಮಕ್ಕಳನ್ನು ಬೇರೆ ಶಾಲೆಗಳಿಗೆ ಕಳಿಸುತ್ತಿದ್ದಾರೆ,ಬಡವರು ಹಾಗೂ ಮಧ್ಯಮ ವರ್ಗದವರು ಮಾತ್ರ ಅನಿವಾರ್ಯವಾಗಿ ಈ ಶಾಲೆಯಲ್ಲಿ ಮಕ್ಕಳನ್ನು ಉಳಿಸಿಕೊಂಡಿದ್ದಾರೆ.ಈ ಸಮಸ್ಯೆ ಮುಂದುವರೆದರೆ ನಾವುಗಳು ಬೇರೆ ಶಾಲೆಗಳತ್ತ ಮುಖ ಮಾಡಬೇಕಾಗುತ್ತದೆ ಎಂದು ಪ್ರಾಂಶುಪಾಲರಿಗೆ ಎಚ್ಚರಿಕೆ ನೀಡಿದ್ದಾರೆ.
ಸಂಬಂಧಪಟ್ಟ ಶಿಕ್ಷಣ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾಳಜಿ ವಹಿಸಿ ಈಗಲಾದರೂ ಶಿಕ್ಷಕರನ್ನು ನೇಮಕ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.ಮುಖ್ಯ ಗುರುಗಳಾದ ರುದ್ರಪ್ಪ ಅನವಾರ ಸಾಕಷ್ಟು ಬಾರಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಶಿಕ್ಷಕರ ಸಮಸ್ಯೆ ಕುರಿತು ಪತ್ರ ಕೂಡ ಬರೆಯಲಾಗಿದೆ ಎಂದು ತಿಳಿಸಿದರು. ಈಗಲಾದರೂ ಶಿಕ್ಷಣ ಇಲಾಖೆ ಇತ್ತ ಕಣ್ತೆರೆದು, ಎಚ್ಚೆತ್ತುಕೊಳ್ಳುತ್ತದೆ ಅಥವಾ ಎಲ್ಲವೂ ಎಂಬುದನ್ನು ಕಾದು ನೋಡಬೇಕಾಗಿದೆ.
