
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.ಮೊದಲ ಪ್ರಸವ ಗರ್ಭಿಣಿ, ಬಾಣಂತಿ ಫಲಾನುಭವಿಗಳ ನೋಂದಣಿಯಲ್ಲಿ 2241 ಫಲಾನುಭವಿಗಳ ಗುರಿ ಇಟ್ಟುಕೊಂಡಿದ್ದು, ಒಟ್ಟು 2615 ಫಲಾನುಭವಿಗಳ ನೋಂದಣಿಯ ಸಾಧನೆ ಮಾಡಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಎರಡನೇ ಬಾಣಂತಿಯ ಮಗು ಹೆಣ್ಣು ಮಗು ಜನಿಸಿದ ಫಲಾನುಭವಿಗಳ ನೋಂದಣಿ ಗುರಿ 475 ಇಟ್ಟುಕೊಂಡಿದ್ದು, 1287 ಫಲಾನುಭವಿಗಳ ನೋಂದಣಿ ಮಾಡಿ ಸಾಧನೆಯಲ್ಲಿ ರಾಜ್ಯಮಟ್ಟದಲ್ಲಿ 1ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.ಸರ್ಕಾರ ಸೌಲಭ್ಯಗಳನ್ನು ದಮನಿತ ಮಹಿಳೆ ಮತ್ತು ಮಂಗಳಮುಖಿಯರಿಗೆ ಸಕಾಲಕ್ಕೆ ತಲುಪಿಸಿ ಅವರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ, ಸಮಾಜದ ಮುಖ್ಯವಾಹಿನಿಗೆ ತರಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.
ದಮನಿತ ಮಹಿಳೆಯರು ಹಾಗೂ ಲೈಂಗಿಕ ಅಲ್ಪಸಂಖ್ಯಾತರಿಗೆ ಮನೆಗಳ ನಿರ್ಮಾಣ, ಈ ವರ್ಗದ ವಿದ್ಯಾವಂತರಿಗೆ ಉದ್ಯೋಗ ಅವಕಾಶ ಕಲ್ಪಿಸುವುದು, ಕೌಶಲಾಭಿವೃದ್ಧಿಗೆ ತರಬೇತಿಗಳನ್ನು ಆಯೋಜಿಸುವುದು, ಸಣ್ಣ ಸಣ್ಣ ಉದ್ಯಮಗಳನ್ನು ನಡೆಸಲು ಆಸಕ್ತರಿಗೆ ನೆರವು ಒದಗಿಸುವುದು, ಶಾಲೆಯನ್ನು ತೊರೆದವರಿಗೆ ಶಿಕ್ಷಣ ಮುಂದುವರಿಸಲು ನೆರವು ಒದಗಿಸುವುದು ಪಿಂಚಣಿ ಯೋಜನೆ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ
ಇಲಾಖೆಯ ಯೋಜನೆಗಳಡಿ ಈ ವರ್ಗಗಳಿಗೆ ಸೌಲಭ್ಯಗಳನ್ನು ಒದಗಿಸುವ ಈ ನಿಟ್ಟಿನಲ್ಲಿ ಸಮನ್ವಯತೆಯಿಂದ ಇಲಾಖಾ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಮಕ್ಕಳ ಸಹಾಯವಾಣಿ 1098 ಸಂಖ್ಯೆಯೂ ರಾಷ್ಟçವ್ಯಾಪ್ತಿಯೂ ಚಾಲ್ತಿಯಲ್ಲಿರುವುದರಿಂದ ಈ ಸಂಖ್ಯೆಗೆ ಕರೆ ಮಾಡುವ ಮೂಲಕ ಮಕ್ಕಳಾಗಲಿ ಅಥವಾ ಸಾರ್ವಜನಿಕರಾಗಲಿ ತುರ್ತು ನೆರವು ಅಗತ್ಯವಿರುವ ಮಕ್ಕಳು ರಕ್ಷಣೆಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಕ್ಕಳ ಸಹಾಯವಾಣಿಯು ಸಂಕಷ್ಟದಲ್ಲಿರುವ ಮಕ್ಕಳ ಪಾಲಿನ ಸಂಜೀವಿನಿಯಾಗಿದ್ದು, ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಮಕ್ಕಳ ಹಕ್ಕುಗಳಿಗೆ ಧಕ್ಕೆಯಾಗದಂತೆ ಶ್ರಮಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಶಾಲೆಯಿಂದ ಹೊರಗುಳಿದು ಶಿಕ್ಷಣದಿಂದ ಮಕ್ಕಳು ವಂಚಿತರಾಗದAತೆ ಮತ್ತು ವಂಚಿತರಾಗಲು ಕಾರಣಗಳನ್ನು ಹುಡುಕಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮವಹಿಸಿ. ಪ್ರತಿದಿನ ಬೆಳಗಿನ ಪ್ರಾರ್ಥನೆಯ ಸಂದರ್ಭದಲ್ಲಿ ಮಕ್ಕಳಿಗೆ ಸಮಸ್ಯೆಯಾದರೆ 1098 ಅಥವಾ 112 ಸಂಖ್ಯೆಗೆ ಕರೆ ಮಾಡುತ್ತೇವೆ ಎಂಬ ಧ್ಯೇಯವಾಕ್ಯದೊಂದಿಗೆ ಶಪಥ ಮಾಡುವಂತೆ ರೂಢಿಸಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಬಾಲ್ಯ ವಿವಾಹವು ಕಾನೂನು ಅಪರಾಧ ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಿ. ಬಾಲ್ಯ ವಿವಾಹ ಜರಗುವ ಜಿಲ್ಲೆಯ ಎಲ್ಲಾ ದೇವಸ್ಥಾನ, ಕಲ್ಯಾಣ ಮಂಟಪಗಳಲ್ಲಿ ಆಯೋಜಕರಿಗೆ ಬಾಲ್ಯವಿವಾಹ ನಿಷೇಧ ಕುರಿತು ಅರಿವು ಮೂಡಿಸುವ ನಾಮಫಲಕ ಹಾಕುವಂತೆ ಕ್ರಮ ಜರುಗಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲೆಯ ಸಂಕಷ್ಟದಲ್ಲಿರುವ ಮಕ್ಕಳ ವೈದ್ಯಕೀಯ ತಪಾಸಣೆಗೆ ಮತ್ತು ಚಿಕಿತ್ಸೆಗೆ ಹಾಗೂ ವಯಸ್ಸಿನ ದೃಢೀಕರಣ ಪ್ರಮಾಣ ಪತ್ರ ಪಡೆಯಲು ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಸೇವೆ ಒದಗಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
