
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಜಿಲ್ಲಾಡಳಿತ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತ್ಯೋತ್ಸವವನ್ನು ಜಿಲ್ಲೆಯಾದ್ಯಂತ ಇದೇ ಆಗಸ್ಟ್ 20 ರಂದು ವಿಜೃಂಭಣೆ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ನಡೆದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯುವ ಜಿಲ್ಲಾಮಟ್ಟದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಗೆ ಸಂಬAಧಿಸಿದAತೆ ಅಧಿಕಾರಿಗಳಿಗೆ ವಹಿಸಲಾದ ಕೆಲಸ-ಕಾರ್ಯಗಳನ್ನು ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ಜವಾಬ್ದಾರಿಯಿಂದ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು, ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿದಂತೆ ಎಲ್ಲಾ ರೀತಿಯ ಸೌಕರ್ಯವನ್ನು ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ವಿದ್ಯುತ್, ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಜಯಂತಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯತಿ ಮಟ್ಟದ ಶಾಲಾ ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ ವರದಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರದಿ ಸಲ್ಲಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಯಾ ಸಂಘಟನೆಗಳಿAದ ಏರ್ಪಡಿಸಲಾಗುವ ಮೆರವಣಿಗೆ, ಮಾರ್ಗದ ಕುರಿತು ಪೂರ್ವಭಾವಿಯಾಗಿ ಸಂಬAಧಿಸಿದ ಇಲಾಖೆಗೆ ತಿಳಿಸಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ, ಡಿಹೆಚ್‌ಓ ಡಾ. ಮಲ್ಲಿಕಾರ್ಜುನ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಸಮಾಜದ ಜಿಲ್ಲಾಧ್ಯಕ್ಷ ಮಹೇಂದ್ರಕುಮಾರ ಅನಪುರ, ಮಾಜಿ ಜಿಲ್ಲಾಧ್ಯಕ್ಷ ನಾಗರಾಜಗೌಡ ಮಾನಸಗಲ್, ಜಿಲ್ಲಾ ಉಪಾಧ್ಯಕ್ಷ ದೇವಪ್ಪಗೌಡ ಗುತ್ತೇದಾರ ರಾಚನಹಳ್ಳಿ, ಜಿಲ್ಲಾ ಕಾರ್ಯದರ್ಶಿ ಮಲ್ಲಯ್ಯ ಗುತ್ತೇದಾರ ಗುಂಡಗುರ್ತಿ, ಜಿಲ್ಲಾ ಕಾರ್ಯಾಧ್ಯಕ್ಷ ಸೂರ್ಯಕಾಂತ ಕಟ್ಟಿಮನಿ ಯರಗೋಳ, ಜಿಲ್ಲಾ ಖಜಾಂಚಿ ವೆಂಕಟೇಶ ಕಲಾಲ ಬದ್ದೆಪಲ್ಲಿ, ಜಿಲ್ಲಾ ಸಹ ಕಾರ್ಯದರ್ಶಿ ನಂದುಕುಮಾರ ಜಲಾಲಪುರ, ಚಂದ್ರಶೇಖರ ಕಲಾಲ ಮಾದ್ವಾರ, ರಾಘವೇಂದ್ರ ಕಲಾಲ ಸೈದಾಪೂರ, ಶಾಂತಗೌಡ ಗುತ್ತೇದಾರ ಹೆಗ್ಗಣಗೇರಾ, ಶರಣು ಗುತ್ತೇದಾರ ಮಳ್ಳಳ್ಳಿ, ಪ್ರಕಾಶ ಗುತ್ತೇದಾರ ಬಳಿಚಕ್ರ, ಮೊಗಯ್ಯ ಗುತ್ತೇದಾರ, ಮರೆಪ್ಪ ಇಬ್ರಾಹಿಂಪುರ, ಕಾಶೀನಾಥ ಮುಷ್ಟೂರ್, ದತ್ತು ಸೇರಿದಂತೆ ಇನ್ನಿತರ ಮುಖಂಡರು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
