
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಜಿಲ್ಲಾಡಳಿತ ವತಿಯಿಂದ ಶರಣ ಶ್ರೀ ನುಲಿಯ ಚಂದಯ್ಯ ಜಯಂತ್ಯೋತ್ಸವವನ್ನು ಜಿಲ್ಲೆಯಾದ್ಯಂತ ಇದೇ ಆಗಸ್ಟ್ 19 ರಂದು ವಿಜೃಂಭಣೆ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ನಡೆದ ಶರಣ ಶ್ರೀ ನುಲಿಯ ಚಂದಯ್ಯನವರ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯುವ ಜಿಲ್ಲಾಮಟ್ಟದ ಶರಣ ಶ್ರೀ ನುಲಿಯಾ ಚಂದಯ್ಯ ಜಯಂತಿ ಆಚರಣೆಗೆ ಸಂಬAಧಿಸಿದAತೆ ಅಧಿಕಾರಿಗಳಿಗೆ ವಹಿಸಲಾದ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ಜವಾಬ್ದಾರಿಯಿಂದ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು, ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿದಂತೆ ಎಲ್ಲಾ ರೀತಿಯ ಸೌಕರ್ಯವನ್ನು ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ವಿದ್ಯುತ್, ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಜಯಂತಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯತಿ ಮಟ್ಟದ ಶಾಲಾ ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ ವರದಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರದಿ ಸಲ್ಲಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಯಾ ಸಂಘಟನೆಗಳಿAದ ಏರ್ಪಡಿಸಲಾಗುವ ಮೆರವಣಿಗೆ, ಮಾರ್ಗದ ಕುರಿತು ಪೂರ್ವಭಾವಿಯಾಗಿ ಸಂಬAಧಿಸಿದ ಇಲಾಖೆಗೆ ತಿಳಿಸಬೇಕು ಎಂದು ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ, ಡಿಹೆಚ್‌ಓ ಡಾ. ಮಲ್ಲಿಕಾರ್ಜುನ ಪಾಟೀಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಸಮಾಜದ ಮುಖಂಡ ಅಖಿಲ ಕರ್ನಾಟಕ ಕುಳುವ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಆಂಜನೇಯ ಭಜಂತ್ರಿ, ರಾಜ್ಯ ಸದಸ್ಯರಾದ ಭೀಮರಾಯ ಭಜಂತ್ರಿ, ಗುರುಮಿಠಕಲ್ ತಾಲೂಕು ಅಧ್ಯಕ್ಷ ಆನಂದ ಭಜಂತ್ರಿ ಗೋಪಾಳಪುರ, ಶಹಾಪುರ ಅಧ್ಯಕ್ಷ ಹೊನ್ನಪ್ಪ ಮಾನ್ಪಡೆ, ಸುರಪುರ ತಾಲೂಕ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಭಜಂತ್ರಿ, ಸುರಪುರ ತಾಲೂಕು ಅಧ್ಯಕ್ಷ ಖಂಡಪ್ಪ ಭಜಂತ್ರಿ, ಶಹಾಪುರ ಅಧ್ಯಕ್ಷ ಹಣಮಂತ ಗೋಗಿ, ಯಾದಗಿರಿ ಅಧ್ಯಕ್ಷ ಹಣಮಂತ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿದ್ದು ಭಜಂತ್ರಿ ಹೆಡಗಿಮದ್ರಾ, ಜಿಲ್ಲಾ ಸಹ ಕಾರ್ಯದರ್ಶಿ ಮರೆಪ್ಪ ಹೆಡಗಿಮದ್ರಾ, ತಾಲೂಕ ಗೌರವಾಧ್ಯಕ್ಷ ಭೀಮರಾಯ ಭಜಂತ್ರಿ ಹೋತಪೇಟ, ಜಿಲ್ಲಾ ಉಪಾಧ್ಯಕ್ಷ ಭೀಮರಾಯ ಭಜಂತ್ರಿ, ಭೀಮಣ್ಣ ಭಜಂತ್ರಿ ಯಾಳಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
