
ಸೆಕ್ಯುಲರ್ ವಾಯ್ಸ್ ನ್ಯೂಸ್ ಹುಮನಾಬಾದ್
ತಾಲೂಕಿನ ಸೀತಾಳಗೇರಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಭೂಕಂಪದ ಅನುಭವ ಆಗಿದ್ದು, ಭೂಮಿ ಅದರುತ್ತಲೇ ಭಯಗೊಂಡ ಜನರಲ್ಲಿ ಆತಂಕ ಮನೆ ಮಾಡಿದೆ.
ರಾತ್ರಿ ಸುಮಾರಿಗೆ ಭಾರಿ ಸದ್ದಿನೊಂದಿಗೆ ಭೂಮಿ ಕಂಪಿಸುತ್ತಲೇ ಮನೆಯ ಮೇಲ್ಭಾಗದಲ್ಲಿನ ಸಾಮಗ್ರಿಗಳು ಅಲ್ಲಾಡಿಸಿದ ಹಾಗೆ ಆಗುತ್ತಿದ್ದಂತೆ ಮನೆಯಲ್ಲಿದ್ದ ಜನರು ಹೊರಗಡೆ ಓಡಿ ಬಂದಿದ್ದಾರೆ. 2.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
