ಕಲಬುರಗಿ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಾತ್ಕಲಿಕ ಪ್ರವಾಸ ಪಟ್ಟಿಯಂತೆ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ನವೆಂಬರ್ 14 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಅಗಮಿಸುವರು.
ಅಂದು ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಕಲಬುರಗಿ ತಾಲೂಕಿನ ಮಾಡಿಯಾಳ ತಾಂಡಾಕ್ಕೆ ತೆರಳಿ ಬೆಳಿಗ್ಗೆ 11.20 ಗಂಟೆಗೆ ಸರ್ಕಾರಿ ಬಾಲಕೀಯರ ಪ್ರೌಢ ಶಾಲೆಯಲ್ಲಿ ವಿವೇಕ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು.
ನಂತರ ಅಲ್ಲಿಂದ ಸೇಡಂ ಪಟ್ಟಣಕ್ಕೆ ಅಗಮಿಸುವ ಮುಖ್ಯಮಂತ್ರಿಗಳು, ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಅಯೋಜಿಸಿರುವ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022 ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದು ಮಧ್ಯಾಹ್ನ 3.50 ಗಂಟೆಗ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
