ನೀರು ಪೂರೈಕೆ ಮಾಡುವ ಬಾಕಿ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಿ: ಮನೋಜ್ ಜೈನ್

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಯಾದಗಿರಿ ನಗರಕ್ಕೆ ಕುಡಿಯುವ ನೀರಿಗಾಗಿ ಭೀಮ ನದಿಯಿಂದ ಹೊಸ ಜಾಕ್ವೆಲ್ ಮೂಲಕ ನೀರು ಪೂರೈಕೆ ಮಾಡುವಂತಹ ಬಾಕಿ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಮನೋಜ್ ಜೈನ್ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರದAದು ಕಂದಾಯ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಭೀಮಾ ನದಿಯಿಂದ ಯಾದಗಿರಿ ನಗರಕ್ಕೆ ನೀರು ಪೂರೈಸುವ ಜಾಕ್ವೆಲ್ ಕಾಮಗಾರಿಗಳನ್ನು ಅಮೃತ 2 ಯೋಜನೆಅಡಿ ಪೂರ್ಣಗೊಳಿಸಲಾಗಿದೆ. ಸದ್ಯ 7.5 ಕಿಲೋಮಿಟರ್ ಪೈಪ್‌ಲೈನ್‌ಗಳನ್ನು ಅಳವಡಿಸಬೇಕಾಗಿದ್ದು, ಬಾಕಿ ಉಳಿದಿರುವ ನಾಲ್ಕು ಕಿಲೋಮೀಟರ್ ಪೈಪ್‌ಲೈನ್ ಅಳವಡಿಸುವ ಕಾರ್ಯವನ್ನು ಬರುವ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆಯನ್ನು ಅವರು ನೀರು ಸರಬರಾಜು ಇಲಾಖೆ ಅಧಿಕಾರಿಗಳಿಗೆ ನೀಡಿದರು.

ಅದರಂತೆ ಪೈಪ್‌ಲೈನ್ ಅಳವಡಿಕೆಗೆ ಸಂಬAಧಪಟ್ಟAತೆ 2 ಬ್ಯಾಚ್ ಗಳಲ್ಲಿ ಕಾಮಗಾರಿ ಕೈಗೊಳ್ಳಬೇಕು. ರೈಲ್ವೆ ಕ್ರಾಸಿಂಗ್ ಮತ್ತು ಇತರ ಕಾಮಗಾರಿಗಳನ್ನು ಪ್ರತ್ಯೇಕವಾಗಿ ಕೈಗೊಂಡು ಪೈಪ್ ಲೈನ್ ಅಳವಡಿಸುವ ಕಾರ್ಯ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯ ಕೃಷ್ಣ ಮೇಲ್ದಂಡೆ ಯೋಜನೆ ಹಾಗೂ ನಾರಾಯಣಪುರ ಜಲಾಶಯ ವ್ಯಾಪ್ತಿಗೆ ಬರುವಂತಹ ಕಾಲುವೆ ಜಾಲಗಳ ವ್ಯಾಪ್ತಿಯಲ್ಲಿನ ಸರ್ಕಾರದ ಜಮೀನಿನ ಬಗ್ಗೆ ಕ್ಷೇತ್ರ ಮಟ್ಟದಲ್ಲಿ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಾಲುವೆಗಳ ಮತ್ತು ಕಾಲುವೆಗಳ ಅಕ್ಕ ಪಕ್ಕದ ವ್ಯಾಪ್ತಿಯ ಜಾಗ ಒತ್ತುವರಿ ಸೇರಿದಂತೆ ಸರ್ಕಾರದ ಇರುವಂತಹ ಜಾಗವನ್ನು ಅಧಿಕೃತ ದಾಖಲಾತಿಗಳೊಂದಿಗೆ ಮಾಹಿತಿಯನ್ನು ಇಟ್ಟುಕೊಳ್ಳುವಂತೆ ಅವರು ಸೂಚನೆ ನೀಡಿದರು.

ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಮನ್ವಯತೆಯಿಂದ ಬೆಳೆ ಕಟಾವು ಪ್ರಾತ್ಯಕ್ಷಿಕೆಗೆ ಸಂಬAಧಪಟ್ಟAತೆ ಬೆಳೆ ಸಮೀಕ್ಷೆಗಾಗಿ ಖಾಸಗಿ ನಿವಾಸಿಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕುರಿತು, ಸಾಧಕ ಬಾದಕಗಳ ಬಗ್ಗೆ ವರದಿ ಸಲ್ಲಿಸುವಂತೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಿಗಾಗಿ 160 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 312 ಅಂಗನವಾಡಿ ಸಹಾಯಕಿಯರ ನೇಮಕಾತಿ ಪಾರದರ್ಶಕ ರೀತಿಯಲ್ಲಿ ಕೈಗೊಳ್ಳಬೇಕು. ಯಾವುದೇ ಅರ್ಜಿಗಳನ್ನು ನಿರಾಕರಿಸುವ ಮುಂಚೆ ಸೂಕ್ತ ಕಾರಣಗಳ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೂ ತರುವಂತೆ  ಸೂಚನೆ ನೀಡಿದರು.

ಜಿಲ್ಲೆಯ ಸುರಪುರ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಬಾಲ್ಯ ವಿವಾಹ ಹೆಚ್ಚಿರುವ ಮತ್ತು ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿರುವ ಕಡೆಗಳಲ್ಲಿ ಸೂಕ್ತ ಜಾಗೃತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಖಾಂತರ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ,  ಹಿಂದುಳಿದ ವರ್ಗಗಳ  ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಗಳ ವ್ಯಾಪ್ತಿಯಲ್ಲಿ ಬರುವಂತಹ ವಿವಿಧ ವಸತಿ ನಿಲಯಗಳಲ್ಲಿ ಕುಡಿಯುವ ನೀರು, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ, ವಿದ್ಯುತ್ ಸೌಲಭ್ಯ, ವಿವಿಧ ವಿದ್ಯುತ್, ಸೋಲಾರ್ ದುರಸ್ತಿ ಕಾರ್ಯ ಮತ್ತು ಸಲಕರಣೆಗಳ ಅವಶ್ಯಕತೆಗಳ ಬಗ್ಗೆ ಪ್ರತಿಯೊಂದು ವಸತಿ ನಿಲಯವಾರು ಖರ್ಚು ವೆಚ್ಚ ವರದಿಯನ್ನು ಸಂಬAಧಪಟ್ಟ ಅಧಿಕಾರಿಗಳು ಸಲ್ಲಿಸಬೇಕು. ತಾಲೂಕುವಾರು ವಸತಿ ನಿಲಯಗಳಲ್ಲಿ ಅವಶ್ಯಕತ್ತೆ ಇರುವ ಮೂಲಸೌಕರ್ಯಗಳ ಬಗ್ಗೆ ಭಾವಚಿತ್ರ ಸಹಿತ ವರದಿ ಸಲ್ಲಿಸುವಂತೆ ತಿಳಿಸಿದ ಅವರು ವಿಶೇಷವಾಗಿ ಬಾಲಕಿಯರ ವಸತಿ ನಿಲಯಗಳಿಗೆ ಪ್ರಥಮ ಆದ್ಯತೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಏಜೆನ್ಸಿಗಳಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ವಿಶೇಷವಾಗಿ ಹಳೆಯ ಮತ್ತು ಹೊಸ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಯಾವುದೇ ಪರಿಸ್ಥಿತಿಯಲ್ಲಿ ಆಯಾ ಕಾಮಗಾರಿಗಳಿಗೆ ನೀಡಿದ ಅನುದಾನ ವಾಪಸ್ ನೀಡದೆ ಸಮರ್ಪಕವಾಗಿ ಬಳಸಿ ಸೂಕ್ತ ಪ್ರಗತಿ ಸಾಧಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅದರಂತೆ ಜಿಲ್ಲೆಯಲ್ಲಿ ಶೇಕಡ 30ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆಯೂ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಮಾತನಾಡಿ, ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಪರಿಹಾರ ನೀಡುವ ಕುರಿತು, ಅತಿವೃಷ್ಟಿಯಿಂದ ಆದ ಮನೆ ಹಾಗೂ ಬೆಳೆ ಹಾನಿ ಕುರಿತು ಅವಶ್ಯಕ ಮಾಹಿತಿ ನೀಡಿದರು. ಕೃಷ್ಣ ಮತ್ತು ಭೀಮ ನದಿ ತೀರದ ಪ್ರವಾಹ ಕುರಿತಂತೆ ಸೂಕ್ತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗರಿಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಎಲ್ಲಾ ತಾಲೂಕಿನ ತಹಶೀಲ್ದಾರರು ಉಪಸ್ಥಿತರಿದ್ದರು.