ಮಕ್ಕಳ ದಿನಾಚರಣೆ: ಮಕ್ಕಳೊಂದಿಗೆ ಸಂವಾದ ನಡೆಸಿದ ಡಿಸಿ

By admin

ಯಾದಗಿರಿ: ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಶ್ರೀಮತಿ ಸ್ನೇಹಲ್ ಅವರು ವಿಧ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಸಂವಾದ ನಡೆಸಿದ ಅವರು, ಬಹು ಆಸಕ್ತಿಯಿಂದ ವಿವಿಧ ಪ್ರಶ್ನೆಗಳನ್ನು ಕೇಳುತ್ತಾ ವಿದ್ಯಾರ್ಥಿಗಳ ಭವಿಷ್ಯದ ಗುರಿಗಳು ಮತ್ತು ಅವರ ಅಭಿಲಾಷೆಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

ಜಿಲ್ಲಾಧಿಕಾರಿಗಳು,ಜಿಲ್ಲಾಡಳಿತ ಸಂಬಂಧದಲ್ಲಿ ಮಾಹಿತಿ ನೀಡುವ ಜೊತೆಗೆ ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರೌಢ ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಸಂವಾದದ ಮೂಲಕ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿ ಮಾರ್ಗದರ್ಶನ ನೀಡಿದರು.

ಮಾನ್ಯ ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಪ್ರಾರಂಭಿಸುವ ಮುನ್ನ ತಮ್ಮ ಪರಿಚಯ ಜೊತೆಗೆ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪರಿಚಯ ಮಾಡಿಕೊಂಡು, ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು.

ವಿದ್ಯಾರ್ಥಿಗಳು ಹೇಳಿದ ಕೆಲವು ಸಮಸ್ಯೆಗಳಿಗೆ ಪರಿಹರಿಸುವದಾಗಿ ಭರವಸೆ ನೀಡಿದರು.

ಅದರಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ತನ್ನದೇ ಆದ ಒಂದು ಗುರಿ ಇರಬೇಕು. ಆ ಗುರಿ ಈಡೇರಲು ಕಠಿಣ ಪರಿಶ್ರಮ ಬೇಕು.ಜೊತೆಗೆ ಸರಳತೆ, ಸಂಸ್ಕೃತಿ ಇರಬೇಕು, ಪರಿಸರದ ಕಾಳಜಿ ಇರಬೇಕು, ಹೆತ್ತವರನ್ನು ಹಾಗೂ ನಾಡನ್ನು ಎಂದಿಗೂ ಮರೆಯಬಾರದೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಮಾತನಾಡಿ ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಪಡೆಯಬೇಕಾದರೆ ಕಠಿಣ ಪರಿಶ್ರಮಪಡಬೇಕೆಂದು ಹೇಳಿದರು.

ಜಿಲ್ಲಾಧಿಕಾರಿಗಳು ಎಲ್ಲಾ ವಿದ್ಯಾರ್ಥಿಗಳಿಗೆ ಸ್ಪೂರ್ತಿಯ ಸೆಲೆಯಾಗಿ ಶಬ್ದಕೋಶ ಹಾಗೂ ಲೆಕ್ಕನಿಕೆಯನ್ನು ನೀಡಿ ಉತ್ತಮ ಭವಿಷ್ಯಕ್ಕೆ ಅಭಿನಂದಿಸಿದರು.

ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಶಾಖೆಗಳ ಪರಿಚಯ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಹಾಗೂ ಸಹಾಯಕ ಆಯುಕ್ತರ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳ, ಜಿಲ್ಲಾ ಪಂಚಾಯತ ಮತ್ತು ವಿವಿಧ ಕಡೆ ಪ್ರತ್ಯಕ್ಷವಾಗಿ ವೀಕ್ಷಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಸೂಕ್ತ ಮಾಹಿತಿಯನ್ನು ಪಡೆದು, ಮಾರ್ಗದರ್ಶನ ನೀಡಲಾಯಿತು.

ಈ ಸಂದರ್ಭದಲ್ಲಿ ಡಿಡಿಪಿಐ ಶಾಂತಗೌಡ ಪಾಟೀಲ, ಈ ಕಾರ್ಯಕ್ರಮದ ಸಂಯೋಜಕರಾದ ವಿಷಯ ಪರಿವೀಕ್ಷಕರಾದ ಬಸಣ್ಣಗೌಡ ಆಲ್ದಾಳ, ವಿಷಯ ಪರಿವೀಕ್ಷಕರು ಹಣಮಂತ, ಮುಖ್ಯ ಗುರುಗಳು ಸುರೇಶ್, ಬಾಲಕೃಷ್ಣ, ಹರೀಶ್, ಎಚ್. ಬಿ. ಹವಾಲದಾರ, ಅಲ್ತಾಫ, ಪಾಂಡುರಂಗ, ಸಿದ್ದಾರಾಮ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.