ಅದ್ದೂರಿ ಶ್ರೀಕೃಷ್ಣ ಜಯಂತಿ ಆಚರಣೆಗೆ ನಿರ್ಧಾರ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಜಿಲ್ಲಾಡಳಿತ ವತಿಯಿಂದ ಶ್ರೀಕೃಷ್ಣ ಜಯಂತ್ಯೋತ್ಸವವನ್ನು  ಜಿಲ್ಲೆಯಾದ್ಯಂತ ಇದೇ ಆಗಸ್ಟ್ 26 ರಂದು ವಿಜೃಂಭಣೆ ಹಾಗೂ ಅದ್ದೂರಿಯಾಗಿ  ಆಚರಿಸಲು ನಿರ್ಧರಿಸಲಾಗಿದೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀಕೃಷ್ಣ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯುವ ಜಿಲ್ಲಾಮಟ್ಟದ ಶ್ರೀಕೃಷ್ಣ ಜಯಂತಿಗೆ ಸಂಬಧಿಸಿದತೆ ಅಧಿಕಾರಿಗಳಿಗೆ ವಹಿಸಲಾದ ಕೆಲಸ-ಕಾರ್ಯಗಳನ್ನು ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ಜವಾಬ್ದಾರಿಯಿಂದ ನಿರ್ವಹಿಸಲು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಯಂತಿ ಆಚರಣೆ ಸಂದರ್ಭದಲ್ಲಿ ಶಿಷ್ಠಾಚಾರ ಪಾಲನೆ, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು, ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿದಂತೆ ಎಲ್ಲಾ ರೀತಿಯ ಸೌಕರ್ಯವನ್ನು ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬೇಕು. ಅದೇ ರೀತಿ ವೇದಿಕೆ, ಕುಡಿಯುವ ನೀರು, ವಿದ್ಯುತ್, ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಜಯಂತಿಗೆ  ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯತಿ ಮಟ್ಟದ ಶಾಲಾ ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ ವರದಿಯನ್ನು ಕನ್ನಡ ಮತ್ತು  ಸಂಸ್ಕೃತಿ ಇಲಾಖೆಗೆ ವರದಿ ಸಲ್ಲಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಯಾ ಸಂಘಟನೆಗಳಿದ ಏರ್ಪಡಿಸಲಾಗುವ ಮೆರವಣಿಗೆ, ಮಾರ್ಗದ ಕುರಿತು ಪೂರ್ವಭಾವಿಯಾಗಿ ಸಂಬಧಿಸಿದ ಇಲಾಖೆಗೆ ತಿಳಿಸಬೇಕು ಎಂದು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಸಮಾಜದ  ಜಿಲ್ಲಾಧ್ಯಕ್ಷ  ತಾಯಪ್ಪ ಯಾದವ್ ಕಾಳೆಬೆಳಗುಂದಿ, ಅಲೆ ಮಾರಿ ಅರೆ ಅಲೆಮಾರಿ ಜಿಲ್ಲಾಧ್ಯಕ್ಷ ನಾರಾಯಣ ಬದ್ದೆಪಲ್ಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಲು, ತಾಲೂಕ ಅಧ್ಯಕ್ಷ ನಾಗಪ್ಪ ಯಾದವ್ ಹೊನಗೇರಾ, ಜಿಲ್ಲಾ ಗೌರವಾಧ್ಯಕ್ಷ ಯಲ್ಲಪ್ಪ ಯಾದವ್ ಮೋಟನಹಳ್ಳಿ, ವೆಂಕಟೇಶ ಯಾದವ್ ಬದ್ದೆಪಲ್ಲಿ, ಲಕ್ಷಣ ಹೊನಗೇರಾ, ನಿಂಗಪ್ಪ ಗಜ್ಜಿ ಹೊನಗೇರಾ, ಗುರುನಾಥ ಬದ್ದೆಪಲ್ಲಿ, ಮಹೇಶ ಪುಟಪಾಕ, ಭೀಮಣ್ಣ ಖಾಡಂಗೇರಾ, ಶರಣ್ಮುಖ ಪುರಲೆ, ನಾಗರಾಜ ಖಾಡಂಗೇರಾ, ಹೊನ್ನಪ್ಪ ಹೊನಗೇರಾ, ಶೇಖರ ಹೊನಗೇರಾ, ಸಣ್ಣೆಪ್ಪ ಮುಖಂಡರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು