
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಮಕ್ಕಳ ರಕ್ಷಣಾ ಕಾರ್ಯಚರಣೆಗೆ ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆ ಮತ್ತು ತಾಲ್ಲೂಕಿನಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ಸುರಪುರ ತಹಸೀಲ್ದಾರ ಕೆ. ವಿಜಯಕುಮಾರ್ ಅಭಿಪ್ರಾಯಪಟ್ಟರು.
ನವದೆಹಲಿ ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಕಾರ್ಮಿಕ ಆಯುಕ್ತರು ನಿರ್ದೇಶನದಂತೆ PAN-INDIA Rescue and Rehabilitation Campaing 2024 (PAN-INDIA ರಕ್ಷಣೆ ಪುನರ್ವಸತಿ ಅಭಿಯಾನ)ದ ಅಂಗವಾಗಿ ಕೆಂಭಾವಿ ಪಟ್ಟಣದಲ್ಲಿ ಜಾಗೃತಿ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವತಂತ್ರ ದಿನಾಚರಣೆ 2024ರ ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ದಿನಾಂಕ: 01.08.2024 ರಿಂದ 31.08.2024ರ ರವರೆಗೆ ಮಕ್ಕಳ ರಕ್ಷಣೆ ಕಾರ್ಯಚರಣೆಗೆ ಇದೆ ಎಂದು ತಿಳಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾರು ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿರಂತರವಾಗಿ ಜನ ಜಾಗೃತಿ, ಕಾನೂನು ಅರಿವು-ನೆರವು ಕಾರ್ಯಕ್ರಮ, ಬೀದಿನಾಟಕಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.
ಶಿವಪ್ಪ ಜಮಾದಾರ್ ಕಾರ್ಮಿಕ ನಿರೀಕ್ಷಕರು ಸುರಪುರ ಮಾತನಾಡಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ರೂ, 20,000 ರೂಗಳಿಂದ 50,000 ರೂ.ಗಳವರೆಗೆ ದಂಡ ಮತ್ತು 6 ತಿಂಗಳಿAದ 2 ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.
ನಂತರ ನಗರದ ಅಂಬೇಡ್ಕರ್ ವೃತ್ತದ, ಬಸವೇಶ್ವರ ವೃತ್ತ, ಬಸ್ ನಿಲ್ದಾಣಗಳಲ್ಲಿನ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ, ತಪಾಸಣೆ ನಡೆಸಿ, 3 ಮಕ್ಕಳನ್ನು ರಕ್ಷಿಸಲಾಯಿತು. ಹಠಾತ್ ದಾಳಿ, ತಪಾಸಣೆ ಸಂಧರ್ಭದಲ್ಲಿ ಮಕ್ಕಳ ರಕ್ಷಣ ಘಟಕದ ದಶರಥ ನಾಯಕ, ರಾಜೇಂದ್ರ ಯಾದವ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿ, ಪುರಸಭೆ ಸಿಬ್ಬಂದಿ, ಪೋಲಿಸ್ ಇಲಾಖೆಯ ಸಿಬ್ಬಂದಿಗಳು, ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು, ಮಾರ್ಗದರ್ಶಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
