
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು ೧೫ ತಪಾಸಣೆ ಮತ್ತು ಹಠಾತ್ ದಾಳಿ, ತಪಾಸಣೆ, ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ಶಹಾಪುರ ಉಪ ತಹಸೀಲ್ದಾರರಾದ ಸೇತುಮಾಧವ ಹೇಳಿದರು.
PAN-INDIA Rescue and Rehabilitation Campaign (PAN-INDIA ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ) ಅಂಗವಾಗಿ ಶಹಾಪೂರದಲ್ಲಿ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆಯಲ್ಲಿ ಕಾನೂನು ಅರಿವು ನೆರವು ಮತ್ತು ಜನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿ ತಿಂಗಳು ೧೫ ತಪಾಸಣೆ ಮತ್ತು ಹಠಾತ್ ದಾಳಿ, ತಪಾಸಣೆ, ಮತ್ತು ಹಠಾತ್ ದಾಳಿ ತಪಾಸಣೆ ಆಯೋಜಿಸಿವುದು, ಮತ್ತು ಪ್ರತಿ ತಿಂಗಳು ಕಾನೂನು ಅರಿವು ನೆರವು ಮತ್ತು ಜನ ಜಾಗೃತಿ ಕಾರ್ಯಕ್ರಮ ಆಯೋಜಿಸುವುದು. ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಶಾಲಾ ಶಿಕ್ಷಕರಿಂದ ಪಾಲಕ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಸಹಾಯಕ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ದಿವ್ಯರಾಣಿ ಅವರು ಮಾತನಾಡಿ, ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಮತ್ತು ಕಾರ್ಮಿಕ ಆಯುಕ್ತರು ಬೆಂಗಳೂರು ಸೂಚನೆಯಂತೆ, ಸ್ವತಂತ್ರ ದಿನಾಚರಣೆ ೨೦೨೪ರ ಅಂಗವಾಗಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ೨೦೨೪ರ ಆಗಸ್ಟ್ ೧ ರಿಂದ ೩೧ರ ವರೆಗೆ ರಕ್ಷಣಾ ಕಾರ್ಯಚರಣೆಗೆ ಸರಕಾರದ ಪ್ರತಿಯೊಂದು ಇಲಾಖೆಯು ಕೈಜೊಡಿಸಿದಾಗ ಮಾತ್ರ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಎಂಬ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ತಿಳಿಸಿದರು.
ಶೀರಸ್ತೇದಾರರಾದ ಸಿದ್ಧನಗೌಡ.ಎನ್ ಬಿರಾದಾರ್ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಬಾಲಕಾರ್ಮಿಕ ಪದ್ಧತಿ ಮತ್ತು ಬಾಲ್ಯವಿವಾಹ ತಡೆಗಟ್ಟಲು ಇಲಾಖೆಯಿಂದ ನಿರಂತರವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕೆಂದು ಕಾರ್ಮಿಕ ಇಲಾಖೆಯಿಂದ ನಿರÀಂತರವಾಗಿ ಜನ ಜಾಗೃತಿ, ಕಾನೂನು ಅರಿವು ನೆರವು ಕಾರ್ಯಕ್ರಮ, ಬೀದಿನಾಟಕಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.
ಶಹಾಪುರ ಕಾರ್ಮಿಕ ನಿರೀಕ್ಷಕರಾದ ಶ್ರೀಮತಿ ಸಾಬೇರಾ ಬೇಗಂ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ರೂ, ೨೦,೦೦೦ ರೂಗಳಿಂದ ೫೦,೦೦೦ ರೂ ಗಳವರೆಗೆ ದಂಡ ಮತ್ತು ೬ ತಿಂಗಳಿAದ ೨ ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನು ಸಹ ವಿಧಿಸಲಾಗುವುದು ಎಂದು ತಿಳಿಸಿದರು.
ಹಠಾತ್ ದಾಳಿ ಸಂಧರ್ಭದಲ್ಲಿ ಸಭೆಯ ನಂತರ ನಗರದ ಬಸವೇಶ್ವರ ವೃತ್ತ, ಮಾರುಕಟ್ಟೆ ಹಾಗೂ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಹಠಾತ್ ದಾಳಿ, ತಪಾಸಣೆ ನಡೆಸಿ, ೧೨ ಮಕ್ಕಳನ್ನು ರಕ್ಷಿಸಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಯಿತು.
ಈ ಸಂದರ್ಭದಲ್ಲಿ ಶಹಾಪೂರ ಸಹಾಯಕ ಸರ್ಕಾರಿ ಅಭಿಯೋಜಕರು ಶ್ರೀಮತಿ ದಿವ್ಯರಾಣಿ ಎಸ್ ನಾಯಕ, ಶ್ರೀಮತಿ ಶಹಾಪೂರ ಪ್ಯಾನಲ್ ವಕೀಲರು ಸತ್ಯಮ್ಮ ಹೊಸಮನಿ, ಸಿದ್ದು ಪಸ್ಪುಲ್, ಲಕ್ಷಿö್ಮÃಕಾಂತ, ಶಿಬರಬಂಡಿ ಶೀರಸ್ತೇದಾರರಾದ ಶ್ರೀ ಸೋಮನಾಥ ಅಂಗಡಿ, ಶಹಾಪೂರ ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿಗಳು ಶ್ರೀ ಸಂಗಣ್ಣ ನುಚ್ಚಿನ್, ಶಹಾಪೂರ ಸಮಾಜ ಕಲ್ಯಾಣ ಇಲಾಖೆ ಮ್ಯಾನೆಜರ್ ಬಾಲರಾಜ್ ಕೋರಬಾರ, ಕಾರ್ಮಿಕ ಇಲಾಖೆಯ ಮೊಹಮ್ಮದ್ ಏಥೇಶ್ಯಾಮ್, ಬಾಲು ನಾಯಕ, ಮಾರ್ಗದರ್ಶಿ ಸಂಸ್ಥೆಯ ಸಿಬ್ಬಂದಿಗಳು, ಮಕ್ಕಳ ರಕ್ಷಣಾ ಘಟಕದ ಪರ್ವತರೆಡ್ಡಿ, ಮಕ್ಕಳ ಸಹಾಯವಾಣಿ ೧೦೯೮ನ ಮಹೇಶ ಕುಮಾರ್, ಪೋಲಿಸ್ ಇಲಾಖೆ ಹಾಗೂ ವಿವಿಧ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
