
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ವಡಗೇರಾ ತಾಲೂಕಿನ ವಡಗೇರಾ.ಎಚ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಾರ್ಡ ನಂ : 03 & 04 ರ ಜಾಡರ್ ಓಣಿಯಲ್ಲಿ ಚರಂಡಿಗಳಲ್ಲಿ ಕಸ ಕಡ್ಡಿ ಹಾಗೂ ಎಲ್ಲಾ ಮನೆಗಳ ಶೌಚಾಲಯದ ನೀರು ರಸ್ತೆಯೆಲ್ಲಾ ಹರಿದಾಡುತ್ತಿದ್ದು, ಈ ಬಗ್ಗೆ ಗ್ರಾಮ ಪಂಚಾಯತಿಗೆ ಸಾಕಷ್ಟು ಸಲ ಮನವಿ ಮಾಡಿಕೊಂಡಿದ್ದರೂ ಸಹ ಇನ್ನೂವರೆಗೂ ಹೊಳೆತ್ತುವ ಕೆಲಸ ನಿರ್ವಹಿಸುತ್ತಿಲ್ಲ ಎಂದು ವಡಿಗೇರಾ ತಾಲೂಕಿನ ಸಾಬಣ್ಣ ಚಿಣ್ಣಿ ಹಾಗೂ ಮಹಿಳೆಯರು ಆರೋಪಿಸಿದ್ದಾರೆ.
ಗ್ರಾಮ ಪಂಚಾಯತಿ ಅಧಿಕಾರಿಗಳು ಈ ವಿಷಯದ ಬಗ್ಗೆ ನಿರ್ಲಕ್ಷಿಸಿರುವುದರಿಂದ ಮೇಲಾಧಿಕಾರಿಗಳಾದ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ಮನವಿ ಸಲ್ಲಿಸಿದರೂ ಸಂಬಂಧಪಟ್ಟ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ ಎಂದು ತಮ್ಮ ಅಳಲುನ್ನು ನಮ್ಮ ಸುದ್ದಿ ವಾಹಿನಿಗೆ ತಿಳಿಸಿದ್ದಾರೆ.
ಇದಲ್ಲದೇ ಗ್ರಾಮ ಪಂಚಾಯತಿಯಲ್ಲಿ ಬರುವ ನಗೇರಾ ಇನ್ನಿತರ ಕಾಮಗಾರಿಗಳಿಗೆ ಬಿಲ್ ಪಾಸ್ ಮಾಡಿಕೊಳ್ಳಲು ನೆರವಾಗಿ ೧೦% ಲಂಚ ಕೇಳುತ್ತಿದ್ದಾರೆ. ಗ್ರಾಮ ಪಂಚಾಯತಿ ಸಂಪೂರ್ಣವಾಗಿ ಲಂಚಾವತಾರದಲ್ಲಿ ತೊಡಗಿಕೊಂಡಿದ್ದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಗ್ರಾಮದ ಹಿರಿಯ ಮುಖಂಡರಾದ ಮಲ್ಲಪ್ಪ ಬಡಿಗೇರ ಗ್ರಾಮ ಪಂಚಾಯತಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮಸ್ಥರ ಹಿತಕಾಡುವ ಗ್ರಾಮ ಪಂಚಾಯತಿ ಅಧಿಕಾರಿಗಳೇ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸದೇ ಇರುವುದು ಆಡಳಿತ ವೈಖರಿಯ ಬಗ್ಗೆ ಪ್ರಶ್ನೆ ಮಾಡುವಂತಾಗಿದೆ ಎಂದು ಅವರು ನುಡಿದರು. ಈಗಾಗಲೇ ಡೆಂಗ್ಯೂ, ಮಲೇರಿಯದಂತಹ ಸಾಂಕ್ರಾಮಿಕ ರೋಗರೋಜಿನೆಗಳ ಹೆಚ್ಚಾಗಿದ್ದು, ಅಧಿಕ ಸೊಳ್ಳೆಯಿಂದ ಇಂತಹ ಖಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ.
ಚರಂಡಿ ಹೊಳೆತ್ತುವ ಕೆಲಸ ನಿರ್ವಹಿಸದೇ ಹೋದಲ್ಲಿ ಮುಂದಿನ ದಿನಗಳಲ್ಲಿ ವಾರ್ಡನ ಎಲ್ಲಾ ನಾಗರಿಕರು ಸೇರಿಕೊಂಡು ಪಂಚಾಯತಿಗೆ ಬೀಗ ಮುದ್ರೆ ಹಾಕಿ ಪ್ರತಿಭಟಿಸಲಾಗುವುದೆಂದು ಇದೇ ಸಂದರ್ಭದಲ್ಲಿ ಅವರು ಪತ್ರಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ.
