ಬಿಜೆಪಿ ವಿಶ್ವದಲ್ಲೇ ಅತ್ಯಂತ ದೊಡ್ಡ ರಾಜಕೀಯ ಪಕ್ಷ:- ಅಮೀನರಡ್ಡಿ ಯಾಳಗಿ.

By admin

ಯಾದಗಿರಿ ಮತಕ್ಷೇತ್ರದ ನಗರ ಮತ್ತು ಗ್ರಾಮೀಣ ಮಂಡಲದ ಬಿಜೆಪಿ ಸದಸ್ಯತ್ವ ಅಭಿಯಾನ

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ರಾಜ್ಯದಲ್ಲಿ ಗತವೈಭವವನ್ನು ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮತ್ತೊಮ್ಮೆ ಬಿಜೆಪಿ ಸರ್ಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಶ್ರಮಿಸಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ತಿಳಿಸಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಯಾದಗಿರಿ ಮತಕ್ಷೇತ್ರದ ನಗರ ಮಂಡಲ ಮತ್ತು ಗ್ರಾಮೀಣ ಮಂಡಲ ವತಿಯಿಂದ ಬಿಜೆಪಿ ಸದಸ್ಯತ್ವ ನೋಂದಣಿ ಕುರಿತು ಶುಕ್ರವಾರ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಬಿಜೆಪಿ ವಿಶ್ವದಲ್ಲೇ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಗುರುತಿಸಿಕೊಂಡು ಅತಿವೇಗವಾಗಿ ದೇಶದಲ್ಲಿ ಬೆಳೆಯುತ್ತಿದೆ. ಪ್ರತಿಯೊಬ್ಬರೂ ಸಮರ್ಪಣಾ ಭಾವದಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕಿದೆ. ಪಕ್ಷ ಸಂಘಟನೆಗೆ ಒಂದು ಅವಕಾಶ ದೊರಕಿದ್ದು, ಪ್ರತಿಯೊಬ್ಬ ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಸದುಪಯೋಗ ಪಡಿಸಿಕೊಂಡು ಪಕ್ಷವನ್ನು ಬಲಗೊಳಿಸಬೇಕಿದೆ. ಜಿಲ್ಲೆಯ 4 ವಿಧಾನಸಭಾ ಕ್ಷೇತ್ರದಲ್ಲಿ ಸದಸ್ಯತ್ವ ಅಭಿಯಾನಕ್ಕೆ ಸಕ್ರೀಯವಾಗಿ ಭಾಗವಹಿಸಿ ಎಂದರು.
ರಾಜ್ಯ ಕಾರ್ಯದರ್ಶಿ ಕು. ಲಲಿತಾ ಅನಪುರ ಮಾತನಾಡಿದ ಅವರು ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 5 ವರ್ಷಕೊಮ್ಮೆ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದೆ. ಸೆ.2ರಂದು ಆರಂಭಗೊಂಡು ಸೆ.17ರವರೆಗೆ ನಡೆಯಲಿದ್ದು, ಸೆ.2ರಂದು ದೇಶದಾದ್ಯಂತ ನಡೆಯುವ ಸದಸ್ಯತ್ವ ನೋಂದಣಿ ಕಾರ್ಯಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಮಾತನಾಡಿದ ಅವರು ಪಕ್ಷದ ಬಲಸಂವರ್ಧನೆಗೆ ದುಡಿದ ಕಾರ್ಯಕರ್ತರನ್ನು ಗುರುತಿಸಿ, ಸೂಕ್ತ ಸ್ಥಾನಮಾನ ನೀಡಲಾಗುವುದು. ಕ್ಷೇತ್ರವ್ಯಾಪ್ತಿಯಲ್ಲಿ 268ಕ್ಕೂ ಹೆಚ್ಚು ಬೂತ್ ಗಳ ವ್ಯಾಪ್ತಿಯಲ್ಲಿ 80 ಸಾವಿರ ರಿಂದ 1 ಲಕ್ಷ ಸದಸ್ಯತ್ವ ನೋಂದಣಿ ಮಾಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು ಹಾಗೂ ಪಕ್ಷದ ವಿವಿಧ ಹಂತದ ಪದಾಧಿಕಾರಿಗಳು, ಕಾರ್ಯಕರ್ತರ ಜತೆಗೆ ಎಲ್ಲ ಹಂತದ ಚುನಾಯಿತ ಜಪ್ರತಿನಿಧಿಗಳು ಸಕ್ರಿಯವಾಗಿ ಪಾಲ್ಗೊಂಡು, ಸದಸ್ಯತ್ವ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು…
ಈ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನ ಜಿಲ್ಲಾ ಸಂಚಾಲಕ ಮೇಲಪ್ಪ ಗುಳಗಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಪರುಶುರಾಮ ಕುರಕುಂದಿ,ದೇವೇಂದ್ರನಾಥ ನಾದ,ಖಂಡಪ್ಪ ದಾಸನ, ಸಿದ್ದಣಗೌಡ ಕಾಡಂನೊರ, ನಗರಸಭೆ ಮಾಜಿ ಅಧ್ಯಕ್ಷ ವಿಲಾಸ ಪಾಟೀಲ್,ನಗರಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ ಕಾಡನೊರ, ರಮೇಶ್ ದೊಡಮನಿ,ಬಸವರಡ್ಡಿ ಕುರಕುಂದ, ಸುನಿತಾ ಚೌಹಾಣ್, ಮಲ್ಲಿಕಾರ್ಜುನ ಕಟ್ಟಿಮನಿ, ಇದ್ದರು. ಗ್ರಾಮೀಣ ಮಂಡಲ ಪ್ರಧಾನ ಕಾರ್ಯದರ್ಶಿ ಶಿವು ಕೊಂಕಲ ಸ್ವಾಗತಿಸಿ ನಿರೂಪಿಸಿದರು ಮತ್ತು ಸಂಗು ಸಾಹು ಅನವಾರ ವಂದಿಸಿದರು