ಶಹಪುರ : ನಗರಸಭೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಶಹಾಪುರ ನಗರಸಭೆ ನೂತನ ಅಧ್ಯಕ್ಷರಾಗಿ ಮೇಹರೂನ್ ಬೇಗಮ್ ಲೀಯಾಕತ್ ಪಾಷಾ, ಉಪಾಧ್ಯಕ್ಷರಾಗಿ ಭೀಮಬಾಯಿ ದೇವೇಂದ್ರಪ್ಪ ಗೋನಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
31 ಸದಸ್ಯ ಬಲದ ನಗರ ಸಭೆಯಲ್ಲಿ ಕಾಂಗ್ರೆಸ್ 16 ಸ್ಥಾನ, ಬಿಜೆಪಿ 12, ಎಸ್ ಡಿ ಪಿ ಐ 2, ಮತ್ತು 1 ಸ್ವತಂತ್ರ್ಯ ಅಭ್ಯರ್ಥಿಗಳಿದ್ದು, ಎರಡನೆ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ ಹಾಗೂ ‌ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಮಹಿಳೆ ಮೀಸಲಾತಿ ಪ್ರಕಟವಾಗಿತ್ತು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾಗಿ ಮೆಹರೂನ್ ಬೇಗಮ್ ಮತ್ತು ಭೀಮಬಾಯಿ ಶನಿವಾರ ನಡೆದ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದರು.ಪ್ರತಿಸ್ಪರ್ಧಿಯಾಗಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ, ಉಪವಿಭಾಗಾಧಿಕಾರಿ ಹಂಪಣ್ಣ ಸಜ್ಜನ್ ಘೋಷಿಸಿದರು. ಫಲಿತಾಂಶದ ನಂತರ ಕಾಂಗ್ರೆಸ್ ನ ಸದಸ್ಯರು ಮತ್ತು ಬೆಂಬಲಿಗರು ನಗರಸಭೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷರು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ನನ್ನ ಮೇಲೆ ನಂಬಿಕೆ ವಿಶ್ವಾಸವಿಟ್ಟು ಅಧ್ಯಕ್ಷರಾಗಿ ಆಯ್ಕೆಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸ ನಂಬಿಕೆ ಉಳಿಸುವ ಕೆಲಸ ಮಾಡುತ್ತೇನೆ. ಎಲ್ಲಾ ಸದಸ್ಯರ ಒಮ್ಮತದಿಂದ ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಗರಸಭೆಯ ಎಲ್ಲಾ ಸದಸ್ಯರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಇದೆ ವೇಳೆ ತಹಸಿಲ್ದಾರ್ ಉಮಾಕಾಂತ್ ಹಳ್ಳೆ, ಪೌರಾಯುಕ್ತ ರಮೇಶ್ ಬಡಿಗೇರ್, ನಗರಸಭೆ ಸದಸ್ಯರು ಇದ್ದರು.