ಸೆಪ್ಟಂಬರ್ 3 ರಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣನವರಿಗೆ ಜಿಲ್ಲಾ ಜೆಡಿಎಸ್ ಪಕ್ಷದಿಂದ ಅದ್ದೂರಿ ಸನ್ಮಾನ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸುತ್ತಿರುವ ಕೇಂದ್ರ ಸರ್ಕಾರದ ರೈಲ್ವೆ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣನವರಿಗೆ ದಿನಾಂಕ 3-09-2024 ರಂದು ಸಂಜೆ 5.30ಕ್ಕೆ ಯಾದಗಿರಿ ನಗರದ ಚಿತ್ತಾಪುರ ರಸ್ತೆಯಲ್ಲಿನ ಸಪ್ತಪದಿ ಫಂಕ್ಷನ್ ಹಾಲ್‌ನಲ್ಲಿ ಜಿಲ್ಲಾ ಜೆಡಿಎಸ್ ಪಕ್ಷದಿಂದ ಅದ್ದೂರಿಯಾಗಿ ಸ್ವಾಗತ-ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಗುರುಮಠಕಲ್ ಶಾಸಕರಾದ ಶರಣಗೌಡ ಕಂದಕೂರ ಅವರು ವಹಿಸಲಿದ್ದಾರೆ. ಈ ವೇಳೆ ಮಾಜಿ ಸಚಿವರಾದ ಡಾ. ಎಬಿ ಮಾಲಕರೆಡ್ಡಿ, ಮಾಜಿ ಶಾಸಕ ಗುರುಪಾಟೀಲ್ ಶಿರವಾಳ, ಜೆಡಿಎಸ್ ಜಿಲ್ಲಾದ್ಯಕ್ಷ ಚನ್ನಪ್ಪಗೌಡ ಮೋಸಂಬಿ ಮತ್ತು ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನ ಅನಪೂರ ಉಪಸ್ಥಿತರಿರುವರು.
ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಪ್ರಮುಖರು, ಹಿರಿಯರು, ಯುವಕರು ಸೇರದಂತೆ ಸಮಸ್ತ ಕಾರ್ಯಕರ್ತರು ಭಾಗಿಯಾಗಿ ಯಶಸ್ವಿಗೊಳಿಸಬೇಕೆಂದು ಪಕ್ಷದ ಮುಖಂಡ ವಿಶ್ವನಾಥ ಸಿರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದಕ್ಕೂ ಮುಂಚೆ ಸಚಿವ ವಿ. ಸೋಮಣ್ಣನವರು ಮದ್ಯಾಹ್ನ 3 ಗಂಟೆಗೆ ಕಡೇಚೂರು ಬಾಡಿಯಾಳ ಕೈಗಾರಿಕೆ ಪ್ರದೇಶದಲ್ಲಿನ ರೈಲ್ವೆ ಕೋಚ್ ಫ್ಯಾಕ್ಟರಿಯನ್ನು ವೀಕ್ಷಣೆ ಮಾಡುವರು ಎಂದು ತಿಳಿಸಿದ್ದಾರೆ.