ಬಿಜೆಪಿ ಸದಸ್ಯತ್ವ ಅಭಿಯಾನ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ 10 ಕೋಟಿಗೂ ಅಧಿಕ ಸದಸ್ಯತ್ವ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ
ಹೇಳಿದರು.
ಮೈಲಾಪುರ ಅಗಸಿಯ ಆಂಜನೇಯ ದೇವಸ್ಥಾನದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಷ್ಟ್ರದಾದ್ಯಂತ 10 ಕೋಟಿಗೂ ಅಧಿಕ ಸದಸ್ಯತ್ವವನ್ನು ಮಾಡುವ ಉದ್ದೇಶ ಬಿದ್ದು ಹಿಂದುಳಿದ ವರ್ಗಗಳಿಗೆ ವಿಶೇಷವಾದ ಯೋಜನೆಗಳನ್ನ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ,ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾ ಹಾಗೂ ರಾಜ್ಯಾಧ್ಯಕ್ಷ, ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ 6 ಲಕ್ಷ ಸದಸ್ಯತ್ವ ಮಾಡುವುದರ ಜೊತೆಗೆ ಪ್ರತಿ ಬೂತ್ ಮಟ್ಟದಲ್ಲಿ ಸುಮಾರು 300 ಸದಸ್ಯತ್ವ ಮಾಡುವ ಗುರಿ ಹೊಂದಿದ್ದೇವೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಮಾಜಿ ಅಧ್ಯಕ್ಷ ವಿಲಾಸ ಪಾಟೀಲ್, ನಗರಸಭೆಸದಸ್ಯ ಹಣಮಂತ ಇಟ್ಟಗಿ ಮತ್ತು ಸ್ವಾಮಿದೆವ ದಾಸನಕೆರಿ,ಮಹದೆವಮ್ಮ ಬಿರುನೂರ, ಮಾಜಿ ನಗರಸಭೆ ಮಾಜಿ ಉಪಾಧ್ಯಕ್ಷೆ ಪ್ರಭಾವತಿ ಕಲಾಲ, ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ ದೊಡ್ಡಮನಿ ಮತ್ತು ಮಲ್ಲಿಕಾರ್ಜುನ ಕಟ್ಟಿಮನಿ, ಮಂಜುನಾಥ ಜಡಿ,ಶರಣುಗೌಡ ಅಲಿಪುರ, ಮಹಾದೇವಪ್ಪ ಗಣಪುರ,ಸಾಬು ಚಂಡ್ರಕಿ, ಅಜೇಯ ಮಡ್ಡಿ, ಮಲ್ಲಿಕಾರ್ಜುನ ಕಟ್ಟಿಮನಿ, ಮಲ್ಲು ಕೋಲಿವಾಡ ಸೇರಿದಂತೆ ಬಿಜೆಪಿ ಅನೇಕರು ಉಪಸ್ಥಿತರಿದ್ದರು.