ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದಿನದ ಪ್ರಯುಕ್ತ ಬೃಹತ್ ಮಾನವ ಸರಪಳಿ: ಜಿಲ್ಲಾಧಿಕಾರಿ ಡಾ. ಸುಶೀಲ ಬಿ

By admin

ಜಿಲ್ಲೆಯ ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲೆಯ ಯರಗೋಳ ಗಡಿಯಿಂದ ಗೂಗಲ್ ನ ಗಡಿಯವರೆ ಬೃಹತ್ ಮಾನವ ಸರಪಳಿಯನ್ನು ಆಯೋಜನೆ ಮಾಡಿದ್ದು, ಭಾರತ ಸಂವಿಧಾನದ ಗೌರವ ಮತ್ತು ಘನತೆಯನ್ನು ಎತ್ತಿ ಹಿಡಿಯುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕೈ ಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಕೋರಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರದಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ ಆಯೋಜನೆ ಕುರಿತು ಜಿಲ್ಲೆಯ ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.

ನಮ್ಮದು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು,  ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಬೀದರ್ ರಾಜ್ಯದಿಂದ ಚಾಮರಾಜನಗರ ವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ವಿಶೇಷವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.  ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು,  ಕುಟುಂಬದ ಸದಸ್ಯರು, ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಓ ಲವೀಶ ಒರಡಿಯಾ,  ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್ ಪಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜ, ಸಂಘ ಸಂಸ್ಥೆಗಳ ಮುಖಂಡರಾದ ಮರೆಪ್ಪ ಚಟ್ಟೇರಕರ,  ನಾಗಣ್ಣ ಬಡಿಗೇರ, ಶರಣ ನಾಟೇಕಾರ್, ಮಲ್ಲಿನಾಥ ಸುಂಗಲಕರ್, ಶಿವಪುತ್ರ ಜವಳಿ, ನಿಂಗಪ್ಪ ಬಿರನಾಳ, ಸೈದಪ್ಪ ಕೊಲ್ಲೂರು, ಗೋಪಾಲ ತಳಿಗೇರಿ, ಮಹಾದೇವಪ್ಪ ಗುರುಸುಣಗಿ,  ಭೀಮಪ್ಪ ಕಾಗೆ, ಕಾಶಿನಾಥ ನಾಟೇಕಾರ,  ಶರಣಪ್ಪ ಯರಗೋಳ, ಚಂದಪ್ಪ ಕೂಲೂರು,  ಜುಮ್ಮಣ್ಣ ಗುಡಿಮನಿ ಹುಣಸಗಿ, ಶೇಕ್ ಇಮ್ರಾನ್,  ಗಿರೀಶ ಚಟ್ಟೇರಕರ್, ಶ್ರೀನಿವಾಸ ದಂಡಗುಂಡ, ಶಿವಲಿಂಗ ಚಲುವಾದಿ, ಭೀಮಾಶಂಕರ ಯರಗೋಳ, ಭೀಮಣ್ಣ ಹೊಸಮನಿ,  ಸಾಬಣ್ಣ ಯಂಪಾಡ, ಸಾಯಿಬಣ್ಣ ಕುರಕುಂದ,   ರಾಹುಲ್ ಕೊಲ್ಲೂರ್, ಮಹೇಶ ಕುರಕುಂಬಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.