ಅರ್ಥಪೂರ್ಣವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ನಿರ್ಧಾರ : ಅಚ್ಚುಕಟ್ಟಾಗಿ ಮಾನವಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳಿ : ದರ್ಶನಾಪುರ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಇದೇ ಸೆಪ್ಟೆಂಬರ್ 15 ರಂದು ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಹಮ್ಮಿಕೊಳ್ಳುವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ,ಅಚ್ಚುಕಟ್ಟಾಗಿ ಹಮ್ಮಿಕೊಳ್ಳುವಂತೆ  ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪುರ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು, ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು  ನಡೆದ  ಪೂರ್ವಭಾವಿ ಸಭೆಯಲ್ಲಿ  ಅವರು ಮಾತನಾಡಿದರು.

ಇದೇ ಸೆಪ್ಟೆಂಬರ್ 15 ರಂದು ಜಿಲ್ಲೆಯ ಯರಗೋಳ ದಿಂದ ಗೂಗಲ್ ಬ್ರಿಡ್ಜವರೆಗೆ ಬರುವಂತಹ ಗ್ರಾಮಸ್ಥರು, ವಿದ್ಯಾರ್ಥಿಗಳು,ಸ್ವ ಸಹಾಯ ಸಂಘಗಳವರು,ಅಧಿಕಾರಿ,ಸಿಬ್ಬAದಿಗಳು ಈ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಆಯಾ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರರು, ಪಿಡಿಓ,ನರೇಗಾ,ಗ್ರಾಮ ಪಂಚಾಯತ್ ಅಧಿಕಾರಿ ಸಿಬ್ಬಂದಿಗಳು ಅವಶ್ಯಕ ಪೂರ್ವಸಿದ್ದತಾ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಅಂದು ಬೆಳಿಗ್ಗೆ ಈ ಕಾರ್ಯಕ್ರಮ ಇರುವದರಿಂದ ವಾಹನ ದಟ್ಟಣೆ ಬಗ್ಗೆ ಸೂಕ್ತವಾಗಿ ನಿರ್ವಹಿಸಬೇಕು.ಸಮಾಜ ಕಲ್ಯಾಣ ಇಲಾಖೆ,ಪೋಲಿಸ್ ಇಲಾಖೆ ಸೇರಿದಂತೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಯಾವುದೇ ಲೋಪವಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ ಅವರು ಮಾತನಾಡಿ, ರಾಜ್ಯ  ಸರ್ಕಾರದ  ನಿರ್ದೇಶನದಂತೆ ಬೀದರ ದಿಂದ ಚಾಮರಾಜನಗರ ವರೆಗೆ ಮಾನವ ಸರಪಳಿ ಹಮ್ಮಿಕೊಳ್ಳಲಾಗಿದೆ.ಸೆಪ್ಟೆಂಬರ್ 15 ರಂದು ಜಿಲ್ಲೆಯ ಯಾದಗಿರಿ ಯಿಂದ ಗೂಗಲ್ ಬ್ರಿಡ್ಜವರೆಗೆ ವಿವಿಧ ಥೀಮ್ ಗಳನ್ನು ಒಳಗೊಂಡ  ಮಾನವ ಸರಪಳಿ ಹಾಗೂ ಯಾದಗಿರಿ, ಜಿಲ್ಲಾಡಳಿತಭವನ ಆವರಣದಲ್ಲಿ ಹಾಗೂ ವಡಗೇರಾ ತಾಲೂಕು ಕೇಂದ್ರದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಇದೆ.ಸುಮಾರು 46000 ಜನ ಸಾರ್ವಜನಿಕರು, ವಿದ್ಯಾರ್ಥಿಗಳು 60 ಕಿ.ಮೀ ವ್ಯಾಪ್ತಿಯಲ್ಲಿ  ಭಾಗವಹಿಸುವ ನಿರೀಕ್ಷೆ ಇದೆ.  ಮಾನವ ಸರಪಳಿ ಸಂಭ್ರಮದಿAದ ಹಮ್ಮಿಕೊಳ್ಳುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಸಂಗೀತ,ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಅಪರಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಸಹಾಯಕ ಆಯುಕ್ತರು ಹಂಪಣ್ಣ ಸಜ್ಜನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.