ಕ್ರೀಡಾಪಟುಗಳ ಪ್ರೋತ್ಸಾಹಕ್ಕೆ ಸರ್ಕಾರ ಬದ್ದ :  ಶರಣಬಸಪ್ಪ ದರ್ಶನಾಪುರ

By admin

ನಗರದಲ್ಲಿ 2.50 ಕೋ.ರೂ ವೆಚ್ಚದ  ವಸತಿನಿಲಯ ಕಟ್ಟಡದ ಉದ್ಘಾಟನೆ 

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ರಾಜ್ಯ, ರಾಷ್ಟç ಹಾಗೂ ಅಂತಾರಾಷ್ಟಿçÃಯ ಕ್ರೀಡಾಪಟುಗಳಾಗಿ ಹೊರ ಹೊಮ್ಮಲು ಅನುಕೂಲವಾಗುವಂತೆ ವಿದ್ಯಾರ್ಥಿಗಳಿಗೆ ಕ್ರೀಡಾ ಮೂಲಸೌಕರ್ಯಗಳನ್ನು ಒದಗಿಸಲು  ರಾಜ್ಯ ಸರ್ಕಾರ ವಿಶೇಷ ಕಾಳಜಿ ವಹಿಸುತ್ತಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪುರ ಅವರು ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣ ವ್ಯಾಪ್ತಿಯಲ್ಲಿ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ರಾಜ್ಯ ವಲಯ ಅನುದಾನದಡಿ ನಿರ್ಮಿಸಲಾದ ವಸತಿನಿಲಯ ಕಟ್ಟಡವನ್ನು ಇಂದು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ರಾಜ್ಯ ವಲಯ ಅನುದಾನದಡಿ ಒಟ್ಟು 2.50 ಕೋ.ರೂ ವೆಚ್ಚದಲ್ಲಿ ಸುಸಜ್ಜಿತ  ಕ್ರೀಡಾ ವಸತಿ ನಿಲಯ ಕಟ್ಟಡವನ್ನು ಇಂದು ಉದ್ಘಾಟಿಸಲಾಗಿದೆ. ಇದರಿಂದ ಈ ಭಾಗದ ಬಡ ಮಕ್ಕಳಿಗೆ ಹೆಚ್ಚಿನ ಅನುಕೂವವಾಗಲಿದ್ದು, ರಾಷ್ಟಿçÃಯ ಹಾಗೂ ಅಂತಾರಾಷ್ಟಿçÃಯ ಮಟ್ಟದಲ್ಲಿ ಜಿಲ್ಲೆಯ ಕೀರ್ತಿ ಹೆಚ್ಚಿಸಲು ವಿದ್ಯಾರ್ಥಿಗಳಿಗೆ ಇದು ನೆರವಾಗಲಿದೆ ಎಂದು ಹೇಳಿದರು.

ಜಿಲ್ಲೆಯ 5ರಿಂದ 7 ನೇ ತರಗತಿಯವರೆಗಿನ ಮಕ್ಕಳಿಗೆ ಈ ವಸತಿನಿಲಯ ಸೌಲಭ್ಯ ನೆರವಾಗಲಿದೆ.  50 ವಿದ್ಯಾರ್ಥಿ ಕ್ರೀಡಾಪಟುಗಳಿಗೆ ತಂಗಲು, ಇದು ಅನುಕೂಲವಾಗಿದ್ದು, ಈಗಾಗಲೇ 42 ಜನ ಗಂಡು ಹಾಗೂ  ಹೆಣ್ಣು ಮಕ್ಕಳ ವಿದ್ಯಾರ್ಥಿಗಳು ಇಲ್ಲಿ ನೊಂದಾಯಿಸಿಕೊAಡಿದ್ದಾರೆ. ಕ್ರೀಡಾ ಪ್ರೋತ್ಸಾಹಕ್ಕಾಗಿ ಹಂತ ಹಂತವಾಗಿ ಸಕಲ ಕ್ರೀಡಾ ಮೂಲ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಯುಡಾ ಅಧ್ಯಕ್ಷ ರವಿ ಮಾಲಿಪಾಟೀಲ, ನಗರಸಭೆ ಸದಸ್ಯ ಪ್ರಭಾವತಿ ಮಾರುತಿ ಕಲಾಲ,ಮುಖಂಡರಾದ ಬಸುಗೌಡ ಬಿಳಾರ,ಮರೆಪ್ಪ ಈಟೆ,ರಾಘವೇಂದ್ರ, ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.