
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಯಾದಗಿರಿ ಅರಣ್ಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 2024ರ ಸೆಪ್ಟೆಂಬರ್ 10 ರಂದು ಯಾದಗಿರಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ತಾಯಿಯ ಹೆಸರಿನಲ್ಲಿ ಒಂದು ಸಸಿ ಅಭಿಯಾನದ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀಮತಿ ಬಿ.ಎಸ್. ರೇಖಾ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಮರಿಯಪ್ಪ, ಯಾದಗಿರಿ ಸಿ.ಜೆ.ಎಮ್ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಬಾಳಾ ಸಾಹೇಬ್ ವಡವಾಡೆ, ಯಾದಗಿರಿ ಜೆ.ಎಂ.ಎಫ್.ಸಿ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಅರುಣ್ ಚೌಗುಲೆ, ಯಾದಗಿರಿ ಜೆ.ಎಂ.ಎಫ್.ಸಿ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀ ರಾಹುಲ್ ಚಾಂಬಾರ್, ಯಾದಗಿರಿ ಜಿಲ್ಲಾ ವಕೀಲರ ಸಂಘ ಅಧ್ಯಕ್ಷರು ಶ್ರೀ ಸಿ.ಎಸ್.ಮಾಲಿಪಾಟೀಲ್, ವಕೀಲರ ಸಂಘದ ಸದಸ್ಯರು ಸಸಿ ನೆಡೆಸಿದರು.
ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳು ಶ್ರೀ ಭೀಮಾಶಂಕರ ಗಣಪೂರ, ಯಾದಗಿರಿ ಅರಣ್ಯ ಇಲಾಖೆ ಗತ್ತು ಅರಣ್ಯ ವಲಯ ಶ್ರೀ ಚಿದಾನಂದ ಹಿರೇಮಠ, ಶ್ರೀ ಲಿಂಗರಾಜ ದಲವಾಯಿ, ಅರಣ್ಯ ಅಧಿಕಾರಿಗಳು, ನ್ಯಾಯಾಲಯದ ಸಿಬ್ಬಂದಿಗಳು ಇನ್ನಿತರು ಉಪಸ್ಥಿತರಿದ್ದರು.
