“ನಮ್ಮ ಹಿರಿಯರು ನಮ್ಮ ಆದರ್ಶ” ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

“ವಿಶ್ವ ಹಿರಿಯ ನಾಗರಿಕರ ದಿನಾಚರಣೆ” ಅಂಗವಾಗಿ “ನಮ್ಮ ಹಿರಿಯರು ನಮ್ಮ ಆದರ್ಶ” ಘೋಷವಾಕ್ಯದೊಂದಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರಿಕರಿಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಂಸ್ಕೃತಿಕ  ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.

ಯಾದಗಿರಿ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್ ಅವರು ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲೆಯಲ್ಲಿ ಹಿರಿಯ ನಾಗರಿಕರಾಗಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆ “ನಮ್ಮ ಹಿರಿಯರು ನಮ್ಮ ಆದರ್ಶ” ಘೋಷವಾಕ್ಯದೊಂದಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರಿಕರಿಗೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಂಸ್ಕೃತಿಕ ಸ್ಪರ್ಧೆ ಏರ್ಪಡಿಸಿ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು ಉತ್ಸಾಹದಿಂದ ಪಾಲ್ಗೊಂಡು ಸಂತೋಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ವೀರನಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು ರಾಜು ಬಾವಿಹಳ್ಳಿ, ನಿವೃತ್ತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಜಿಲ್ಲೆಯ ಹಿರಿಯ ನಾಗರಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.