ಬಿಜೆಪಿ ಎಸ್‍ಟಿ ಮೋರ್ಚಾ ಸಮಾವೇಶ- ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಶಾಸಕ ರಾಜೂಗೌಡ ಕರೆ 

By admin

ಬಿಜೆಪಿ ಎಸ್‍ಟಿ ಮೋರ್ಚಾ ಸಮಾವೇಶ- ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

ಸುರಪುರ: ಇದೇ 20ರಂದು ಬಳ್ಳಾರಿಯಲ್ಲಿ ಎಸ್‍ಟಿ ಮೋರ್ಚಾ ಸಮಾವೇಶ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಜೆ.ಪಿ.ನಡ್ಡಾಜಿ ಅವರು ಭಾಗವಹಿಸಲಿದ್ದಾರೆ.
ಈ ಸಮಾವೇಶದಲ್ಲಿ ಸುಮಾರು ಹೆಚ್ಚಿನ ಜನರು ಭಾಗವಹಿಸುವ ನಿರೀಕ್ಷೆ ಇದೆ. ಕೊಪ್ಪಳ, ರಾಯಚೂರು, ಯಾದಗಿರಿ ಚಿತ್ರದುರ್ಗ, ಬಳ್ಳಾರಿ ಸುತ್ತಲಿನ ಪ್ರದೇಶಗಳಿಂದ ಅತಿ ಹೆಚ್ಚು ಜನರನ್ನು ನಿರೀಕ್ಷಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಈ ಸಮಾವೇಶಕ್ಕೆ ಜನರು ಬರಲಿದ್ದಾರೆ.
ಬಿಜೆಪಿ ಮುಖಂಡರು ಮತ್ತು ಬಿಜೆಪಿ ಸರಕಾರವು ಮೀಸಲಾತಿ ಹೆಚ್ಚಳಕ್ಕೆ ವಿರೋಧಿಗಳು ಎಂಬ ಆಕ್ಷೇಪ ಮತ್ತು ಸುಳ್ಳು ಮಾಹಿತಿಯನ್ನು ಕಾಂಗ್ರೆಸ್ ಮುಖಂಡರು ಜನರ ಮನದಲ್ಲಿ ಬಿತ್ತಿದ್ದರು. ಅದನ್ನು ಹೋಗಲಾಡಿಸುವ ಮಾದರಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಮೀಸಲಾತಿಯನ್ನು ಹೆಚ್ಚಿಸಿದೆ. ಇದು ಬಿಜೆಪಿಯ ಬದ್ಧತೆಗೆ ಸ್ಪಷ್ಟ ನಿದರ್ಶನ. ಇದಕ್ಕಾಗಿ ಎಸ್‍ಟಿ ಸಮುದಾಯದ ಪರವಾಗಿ ಬೊಮ್ಮಾಯಿ, ಪಕ್ಷಕ್ಕೆ ಮಾರ್ಗದರ್ಶನ ಮಾಡುತ್ತಿರುವ ಹಿರಿಯ ಮುಖಂಡ ಶ್ರೀ ಯಡಿಯೂರಪ್ಪ ಅವರಿಗೆ ಹಾಗೂ ರಾಜ್ಯ ಸಚಿವ ಸಂಪುಟಕ್ಕೆ ಧನ್ಯವಾದಗಳು ಎಂದು ರಾಜುಗೌಡ ತಿಳಿಸಿದರು
ಈ ಸಮಾವೇಶದಲ್ಲಿ ರಾಜ್ಯದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆದ ಶ್ರೀ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‍ಕುಮಾರ್ ಕಟೀಲ್, ಕೇಂದ್ರ – ರಾಜ್ಯ ಸರಕಾರಗಳ ಸಚಿವರು, ಕೋರ್ ಕಮಿಟಿ ಸದಸ್ಯರು ಭಾಗವಹಿಸಲಿದ್ದಾರೆ.
ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಅವರು ಈಚೆಗೆ ಬೆಂಗಳೂರಿಗೆ ಬಂದಾಗ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಗೆ ನಮನ ಸಲ್ಲಿಸಿ ನಮ್ಮ ಸಮಾಜದ ಆತ್ಮಾಭಿಮಾನ ಹೆಚ್ಚಿಸಿದ್ದಾರೆ ಎಂದರು
ಹಿಂದೆ ಕಾಂಗ್ರೆಸ್ ಪಕ್ಷವು ಕೇವಲ ಮತಬ್ಯಾಂಕ್ ರಾಜಕೀಯದಲ್ಲಿ ನಮ್ಮ ಸಮುದಾಯವನ್ನು ಬಳಸಿಕೊಂಡಿತ್ತು. ಆದರೆ, ಬಿಜೆಪಿ ನಮ್ಮ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಿದೆ. ಮುಂದಿನ 2023ರ ಚುನಾವಣೆಯಲ್ಲಿ ಬಿಜೆಪಿಗೆ ನಾವೆಲ್ಲರೂ ನಮ್ಮ ಮತ ಹಾಕುವ ಮೂಲಕ ಆ ಪಕ್ಷದ ಋಣವನ್ನು ತೀರಿಸಲು ಬದ್ಧರಿದ್ದೇವೆ. ಬಿಜೆಪಿ ಡಬಲ್ ಎಂಜಿನ್ ಸರಕಾರಗಳ ಜನೋಪಯೋಗಿ ಕಾರ್ಯಕ್ರಮಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಟ್ಟು ನಾವೆಲ್ಲರೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳುತ್ತೇವೆ ಎಂದು ನುಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ವಕ್ತಾರ ಎಚ್.ಸಿ.ಪಾಟೀಲ್, ಡಾ.ಸುರೇಶ ಆರ್. ಸಜ್ಜನ,
ಎಸ್.ಪಿ ದಯಾನಂದ ಬಸವರಾಜ ಸ್ವಾಮಿ ಸ್ಥಾವರಮಠ,ಬಿಜೆಪಿ ತಾಲೂಕು ಅಧ್ಯಕ್ಷ ಮೇಲಪ್ಪ ಗುಳಗಿ,ರಂಗನಗೌಡ ದೇವಿಕೇರಿ ಇತರರು ಉಪಸ್ಥಿತರಿದ್ದರು.