ಸ್ವಚ್ಛತೆಯೇ ಸೇವೆ ಪಾಕ್ಷಿಕ ಆಂದೋಲನ : ಸಚಿವರಿಂದ ಚಾಲನೆ ಸ್ವಚ್ಛತೆಯೆ ಪ್ರತಿಜ್ಞಾವಿಧಿ ಬೋಧನೆ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಕಲ್ಯಾಣ ಕರ್ನಾಟಕ ವಿಮೋಚನೆಯ ದಿನಾಚರಣೆಯ ಪ್ರಯುಕ್ತ, ಜಿಲ್ಲಾಡಳಿತ, ಯಾದಗಿರಿ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ 2024ರ ಸೆಪ್ಟೆಂಬರ್ 17 ರಂದು ಜಿಲ್ಲಾ ಕ್ರೀಡಾಂಗದಲ್ಲಿ ಹಮ್ಮಿಕೊಳ್ಳಲಾಯಿತು.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಸ್ವಚ್ಛತೆಯೇ-ಸೇವೆ ಪಾಕ್ಷಿಕ-2024 ಆಂದೋಲನಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಆಂದೋಲನವು 2024ರ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2ರ ವರೆಗೆ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ಜಾಗೃತಿ ಮೂಡಿಸಿ, ನೈರ್ಮಲ್ಯ ಅಭ್ಯಾಸಗಳನ್ನು ರೂಡಿಸಿಕೊಳ್ಳುವಂತೆ ಜನರಲ್ಲಿ ಪ್ರೇರೆಪಣೆಗೊಳಿಸಲು ಗ್ರಾಮ ಪಂಚಾಯತ್, ಶಾಲೆ, ಅಂಗನವಾಡಿ, ಇತರೆ ಕಚೇರಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಲ್ಲಿ ಶ್ರಮದಾನ ಹಮ್ಮಿಕೊಳ್ಳುವುದು ಹಾಗೂ ಗ್ರಾಮದಲ್ಲಿನ ಬ್ಲಾಕ್ ಸ್ಪಾಟ್ ಗಳನ್ನು  ಗುರುತಿಸಿ, ಆ ಸ್ಥಳವನ್ನು ಸ್ವಚ್ಛಗೊಳಿಸಿ ಕಸ ಹೊಂದಿರುವ ಸ್ಥಳದಿಂದ ಸ್ವಚ್ಛತೆ ಇರುವ ಸ್ಥಳವಾಗಿ ರೂಪಾಂತರಗೊಳಿಸಿ ಜನರಲ್ಲಿ ಸ್ವಚ್ಛತೆಯ ಅಭ್ಯಾಸಗಳನ್ನು ರೂಡಿಸಿಕೊಳ್ಳುವಂತೆ ಪ್ರೆರೇಪಿಸುವ ಜಾಗೃತಿ ಆಂದೋಲವಾಗಿದೆ ಎಂದರು.
ಪ್ರತಿಯೊಬ್ಬರು ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡದೆ ಗ್ರಾಮ ಪಂಚಾಯತಿಯ ಸ್ವಚ್ಛ ವಾಹಿನಿಗೆ ನೀಡಬೇಕು ಪ್ಲಾಸ್ಟಿಕ್ ವಸ್ತುಗಳನ್ನು ತ್ಯಜಿಸಿ, ಮರುಬಳಕೆಯ ವಸ್ತುಗಳು ಅಥವಾ ಬಟ್ಟೆ ಚೀಲಗಳನ್ನು ಉಪಯೋಗಿಸಬೇಕು ಗ್ರಾಮ ಪಂಚಾಯತಿಯ ಸಿಬ್ಬಂದಿಯವರು ಪ್ರತಿ ಮನೆಯಿಂದ ಬರುವ ತ್ಯಾಜ್ಯವನ್ನು ವಿಂಗಡಿಸಿ ನೀಡುವಂತೆ ಜನರಲ್ಲಿ ಗ್ರಾಮ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಅಭ್ಯಾಸಗಳನ್ನು ರೂಡಿಸಿಕೊಳ್ಳಲು ಸ್ವಚ್ಛತೆಯ ಪ್ರತಿಜ್ಞಾವಿಧಿ ಭೋದಿಸಲಾಯಿತು. ಶಾಲಾ ಕಾಲೇಜುಗಳಲ್ಲಿನ ಮಕ್ಕಳಲ್ಲಿ  ಸ್ವಚ್ಛತೆಯ ಅಭ್ಯಾಸಗಳನ್ನು ರೂಡಿಸಿಕೊಳ್ಳಲು, ರಂಗೋಲಿ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪ್ರತಿಜ್ಞಾವಿಧಿ ಬೋದನೆ, ಸ್ವಚ್ಛತೆಯ ಜಾಥಾ ಮುಂತಾದ ಚುಟುವಟಿಕೆಗಳನ್ನು ಚುನಾಯಿತ ಪ್ರತಿನಿಧಿಯವರು, ಗ್ರಾಮದ ಮುಖಂಡರು, ಯುವಕರು, ಮಹಿಳೆಯರು, ಶಾಲಾ-ಕಾಲೇಜು ಮಕ್ಕಳು ಹಾಗೂ ಸಹಭಾಗಿತ್ವದಲ್ಲಿ ಸ್ವಚ್ಛತೆಯೇ ಸೇವೆ ಪಾಕ್ಷಿಕ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ. ನಮ್ಮ ಗ್ರಾಮದ ಸ್ವಚ್ಛತೆ, ಸ್ವಚ್ಛತೆ ಕಾಪಾಡುವಲ್ಲಿ ನಾನು ಭಾಗಿದಾರನಿದ್ದೆನೆ ಮತ್ತು ನನ್ನ ಜವಾಬ್ದಾರಿ ಇದೆ ಎಂಬುದು ಜನರಲ್ಲಿ ಅರಿವು ಮೂಡಬೇಕು ಎಂದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಶ್ರೀ ಛಲವಾದಿ ನಾರಾಯಣ ಸ್ವಾಮಿ, ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಜಿ. ಸಂಗೀತಾ, ಜಿ.ಪಂ.ಉಪಕಾರ್ಯದರ್ಶಿಗಳಾದ ವಿಜಯಕುಮಾರ ಮಡ್ಡೆ, ಯೋಜನಾ ನಿರ್ದೇಶಕರು ಜಿ.ಪಂ ಹಾಗೂ ಸ್ವ.ಭಾ.ಮಿ ನೋಡಲ್ ಅಧಿಕಾರಿಗಳಾದ ಬಿ.ಎಸ್ ರಾಠೋಡ್, ಸಿಪಿಒ, ಕೆ ಕುಮಲಯ್ಯ, ಸಿಎಒ ವೆಂಕಟೇAಶ ಚಟ್ನಹಳ್ಳಿ ಸೇರಿದಂತೆ ಹಿರಿಯ ಅಧಿಕಾರಿಗಳು, ಅಧಿಕ್ಷರು,  ಸಮಾಲೋಚಕರು, ಸಿಬ್ಬಂದಿ ಹಾಗೂ ವಿವಿಧ ಶಾಲಾ ಮಕ್ಕಳು, ಶಿಕ್ಷಕರು, ಇತರೆ ಗಣ್ಯರು ಉಪಸ್ಥಿತರಿದ್ದರು.