ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹ:-ಮಹೇಶರಡ್ಡಿ ಮುದ್ನಾಳ.

By admin

ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನೆ…

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಮುಡಾ ಹಗರಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿರುವ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಸುಭಾಷ ಚಂದ್ರ ವೃತ್ತದಲ್ಲಿ ರಸ್ತೆ ತಡೆ ಮಾಡಿ ಬೃಹತ್‌ ಪ್ರತಿಭಟನೆ ನಡೆಸಿದರು ಪ್ರತಿಭಟನಾಕಾರರು ಉದ್ದೇಶಿಸಿ ಮಾತನಾಡಿದ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಅವರು ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಆಗ್ರಹಿಸಿದ್ದಾರೆ.ಈ ನೆಲದ ಕಾನೂನು ಎಲ್ಲರಿಗೂ ಒಂದೇ ಆಗಿರುತ್ತದೆ. ಇತರರ ವಿಚಾರದಲ್ಲಿ ರಾಜೀನಾಮೆ ಕೇಳಲು ಬಹಳ ಆಸಕ್ತಿ ವಹಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಸರದಿ ಬಂದಾಗ ರಾಜಿನಾಮೆ ನೀಡದೆ ವೃಥಾ ಕಾಲಹರಣ ಮಾಡುತ್ತಿರುವುದು ನ್ಯಾಯಾಂಗ ಮತ್ತು ಸಂವಿಧಾನಕ್ಕೆ ಎಸಗಿದ ಘೋರ ಅಪಚಾರವಾಗಿದೆ ಎಂದು ಹೇಳಿದರು…
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕು.ಲಲಿತಾ ಅನಪುರ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಸಂಪತ್ತನ್ನು ಲೂಟಿಗೈದವರನ್ನು ಜೈಲಿಗೆ ಅಟ್ಟಬೇಕು, ನಮ್ಮದು ನುಡಿದಂತೆ ನಡೆವ ಸರಕಾರ ಎಂದೆಲ್ಲಾ ಬೊಗಳೆ ಬಿಡುತ್ತಿದ್ದ ಇವಾಗ ಸಿದ್ದರಾಮಯ್ಯ ಅವರಿಗೆ ತನ್ನ ಮಾತನ್ನು ಉಳಿಸಿಕೊಳ್ಳುವ ಅವಕಾಶ ಒದಗಿ ಬಂದಿದೆ. ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ, ಡಿನೋಟಿಫಿಕೇಷನ್ ಪ್ರಕರಣ, ಅಧಿಕಾರ ದುರ್ಬಳಕೆ, ಸ್ವಜನ ಪಕ್ಷಪಾತ ಸಹಿತ ಸಾಲು ಸಾಲು ಹಗರಣಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನಿನ ಕುಣಿಕೆಯಿಂದ ಪಾರಾಗಲು ಸಾಧ್ಯವೇ ಇಲ್ಲ ಎಂಬುದನ್ನು ರಾಜ್ಯದ ಜನತೆಗೆ ಚೆನ್ನಾಗಿಯೇ ಅರಿತುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಅಲೆಮಾರಿ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ದೆವಿಂದ್ರನಾಥ ನಾದ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರದ ದಾಹದಿಂದ ಜನರ ಭಾವನೆಯೊಂದಿಗೆ ಚೆಲ್ಲಾಟವಾಡಿ, ರಾಜ್ಯವನ್ನು ದಿವಾಳಿಯ ಅಂಚಿಗೆ ನೂಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿಗೆ ಅನುಗುಣವಾಗಿ ಶೀಘ್ರ ರಾಜೀನಾಮೆಯನ್ನು ನೀಡಿ ಮುಂದಿನ ಪ್ರಕ್ರಿಯೆಗೆ ಸಹಕರಿಸಿ ಈ ನೆಲದ ಕಾನೂನನ್ನು ಗೌರವಿಸಬೇಕು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮ ಮತ್ತು ಪರುಶುರಾಮ ಕುರಕುಂದಿ,ಮೆಲ್ಲಪ್ಪ ಗುಳಗಿ, ವೆಂಕಟರಡ್ಡಿ ಅಬ್ಬೆತುಮಕೂರು, ಜಿಲ್ಲಾ ವಕ್ತಾರ ಹಣಮಂತ ಇಟಗಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಸೋನ್ನದ,ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ,ಹುಸೇನಬಾಷಾ.ಕೆ. ಕುರಕುಂದಾ, ನಗರಸಭೆ ಮಾಜಿ ಅಧ್ಯಕ್ಷ ವಿಲಾಸ ಪಾಟೀಲ್,ನಗರಸಭೆ ಮಾಜಿ ಉಪಾಧ್ಯಕ್ಷೆ ಪ್ರಭಾವತಿ ಕಲಾಲ,
ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ,ಮಂಜುನಾಥ ದಾಸನಕೆರಿ, ವಿಜಯಲಕ್ಷ್ಮಿ ನಾಯಕ,ಶಾಂತಗೌಡ ಪಗಲಪುರ,ನಗರ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ ದೊಡ್ಡಮನಿ ಮತ್ತು ಮಲ್ಲಿಕಾರ್ಜುನ ಕಟ್ಟಿಮನಿ, ಬಸವರಾಜಪ್ಪಗೌಡ ಬಿಳಾರ,ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಧರ ರಾಯಚೂರು,ಮಹೀಳ ಮೋರ್ಚಾ ಜಿಲ್ಲಾಧ್ಯಕ್ಷ ಸುನಿತಾ ಚೌವ್ಹಾಣ್,ಮೌನೇಶ ಬೆಳಿಗೆರಿ,ಶಕುಂತಲಾ ಜಿ,ನಾಗಪ್ಪ ಗಚ್ಚಿನಮನಿ,ರಾಜಶೇಖರ್ ಉಪ್ಪಿ,ಸಾಬು ಚಂಡ್ರಕಿ,ಶ್ರೀಕಾಂತ ಸುಂಗಲಕರ್, ಮನೋಹರ್ ಪವಾರ, ಸಿದ್ದು ತಳಕ,ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ ಕಡೆಸೂರ ಸೇರಿದಂತೆ ಬಿಜೆಪಿ ಅನೇಕ ಕಾರ್ಯಕರ್ತರು ಇದ್ದರು.