
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರುದ್ಧ ಮುಡಾ ಹಗರಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿರುವ ಕುರಿತು ಉಚ್ಚ ನ್ಯಾಯಾಲಯ ತನಿಖೆಗೆ ಆದೇಶ
ಕೂಡಲೇ ರಾಜಿನಾಮೆ ನೀಡಿ ಎಂದು ನಗರಸಭೆ ಮಾಜಿ ಅಧ್ಯಕ್ಷ ವಿಲಾಸ ಪಾಟೀಲ್ ಆಗ್ರಹಿಸಿದರು.
ಸಿದ್ದರಾಮಯ್ಯ ಅವರಂತ ಬಂಡ ಮುಖ್ಯಮಂತ್ರಿ ಹಿಂದೇದ್ದು ಕಂಡಿಲ್ಲ, ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಇದ್ದಾಗ ಕೂಡ ರಾಜ್ಯಪಾಲರು ಪ್ರಾಸುಕ್ಯೂಷನ್ ಗೆ ಅನುಮತಿ ಕೊಟ್ಟಾಗ ಅಧಿಕಾರದಿಂದ ಕೆಳಗೆ ಇಳಿದು ನ್ಯಾಯಾಲಯಕ್ಕೆ ಗೌರವ ಕೊಟ್ಟಿದ್ದರು ಯಡಿಯೂರಪ್ಪ ನವರು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೂಡ ನ್ಯಾಯಲಯಕ್ಕೆ ಗೌರವ ಕೊಟ್ಟು ರಾಜಿನಾಮೆ ಕೊಟ್ಟು ತನಿಖೆಗೆ ಸಹಕರಿಸಬೇಕು ಇಲ್ಲ ಅಂದರೆ ಮುಂದೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಹೇಳಿದರು.
