
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಯಾದಗಿರಿ ತಾಲ್ಲೂಕಿನ ಬಳಿಚಕ್ರ ಗ್ರಾಮದಿಂದ ಸುತ್ತಮುತ್ತಲಿನ ಹಳ್ಳಿಗಳಾದ ಸೈದಾಪುರ, ಸಾವೂರ, ಬದ್ದೇಪಲ್ಲಿ, ದುಪ್ಪಲಿ, ಕಡೆಚೂರು ಬಾಡಿಯಾಳ ಮತ್ತು ಗೂಗಲ್ ಗ್ರಾಮದ ಸುತ್ತಮುತ್ತಲಿನ ಗ್ರಾಮದವರೆಗೆ ಸುಮಾರು 20 ಆಟೋಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಮಕ್ಕಳನ್ನು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಹಠಾತ್ ದಾಳಿ ಕೈಗೊಂಡು ಕೂಲಿ ಕೆಲಸಕ್ಕಾಗಿ ಆಟೋಗಳಲ್ಲಿ ತೆರಳುತ್ತಿದ್ದ 24 ಮಕ್ಕಳನ್ನು ರಕ್ಷಣೆ ಮಾಡಿ ಅವರು ಮಾತನಾಡಿದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ 1098 ಯಾದಗಿರಿ ಅವರ ಮಾಹಿತಿಯ ಮೇರೆಗೆ ಹಠಾತ್ ದಾಳಿಯನ್ನು ಕೈಗೊಂಡು ಕೂಲಿ ಕೆಲಸಕ್ಕಾಗಿ ಆಟೋಗಳಲ್ಲಿ ತೆರಳುತ್ತಿದ್ದ 24 ಮಕ್ಕಳನ್ನು ರಕ್ಷಿಸಿ, ಮಕ್ಕಳನ್ನು ಮತ್ತೊಮ್ಮೆ ಕೆಲಸಕ್ಕೆ ಹೋಗಬಾರದು ಎಂದು ಪಾಲಕ, ಪೋಷಕರು ಹಾಗೂ ಆಟೋ, ಟಂಟAಗಳ ಚಾಲಕರಿಗೆ ಪೋಸ್ಟರ್ ಹಾಗೂ ಭಿತ್ತಿಪತ್ರಗಳನ್ನು ನೀಡುವುದರ ಮೂಲಕ ಜಾಗೃತಿ ಮೂಡಿಸಿ ಗ್ರಾಮಕ್ಕೆ ಕಳುಹಿಸಲಾಯಿತು.
ಯಾದಗಿರಿ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಸೊಸೈಟಿ ಯೋಜನಾ ನಿರ್ದೇಶಕರಾದ ಶ್ರೀ ರಿಯಾಜ್ ಪಟೇಲ್ ವರ್ಕನಳ್ಳಿ ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದು, ಆಟೋ, ಟಂಟAಗಳಲ್ಲಿ ಕೂಲಿ ಕೆಲಸಕ್ಕಾಗಿ ಕರೆದುಕೊಂಡು ಹೋಗಬಾರದು, ಕಾರ್ಮಿಕ ಇಲಾಖೆಯಿಂದ ನಿರÀಂತರವಾಗಿ ಜನ ಜಾಗೃತಿ, ಕಾನೂನು ಅರಿವು ನೆರವು ಕಾರ್ಯಕ್ರಮ, ಬೀದಿನಾಟಕಗಳನ್ನು ನಡೆಸಲಾಗುತ್ತಿದೆ. ಇದನ್ನು ಮೀರಿಯೂ ಸಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಅಂಗಡಿ ಮಾಲೀಕರ ವಿರುದ್ಧ ಮತ್ತು ಮಕ್ಕಳನ್ನು ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುವ ಆಟೋ, ಟಂಟAಗಳ ಚಾಲಕರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.
ಯಾದಗಿರಿ ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಮಲ್ಲಣ್ಣ.ಬಿ ಮಾತನಾಡಿ, ಶಾಲೆ ಬಿಟ್ಟು ಕೃಷಿ ಮತ್ತು ಇತರೆ ಕೆಲಸಗಳಿಗೆ ಮಕ್ಕಳು ಹೋಗದಂತೆ ಕಾರ್ಮಿಕ ಇಲಾಖೆಯ ವತಿಯಿಂದ ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಹಠಾತ್ ದಾಳಿ ಸಂದರ್ಭದಲ್ಲಿ ಸೈದಾಪುರ ಪಿ.ಎಸ್.ಐ ಭೀಮರಾಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಗೋವಿಂದ ರಾಥೋಡ, ಸಮಾಜ ಕಲ್ಯಾಣ ಇಲಾಖೆಯ ವಿರೇಶ, ಮಕ್ಕಳ ಸಹಾಯವಾಣಿ 1098ನ ಸಾಬಯ್ಯ ನಾಯಕ, ಪೊಲೀಸ್ ಇಲಾಖೆಯ ನಿಲೇಶ್ ಪಾಟೀಲ್, ಸವಿತಾ, ಶಾಂತಮ್ಮ, ಶಿಕ್ಷಣ ಇಲಾಖೆಯ ಮಲ್ಲಪ್ಪ, ಮಲ್ಲಿಕಾರ್ಜುನ ಕಾವಲಿ, ಕಾರ್ಮಿಕ ಇಲಾಖೆಯ ಬಾಲು ನಾಯಕ, ಮಾರ್ಗದರ್ಶಿ ಸಂಸ್ಥೆಯ ಬುಸಪ್ಪನೋರು ಬಸ್ಸು ಉಪಸ್ಥಿತರಿದ್ದರು.
