ಪಕ್ಷನಿಷ್ಠೆಗೆ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ದೊರಕಿದೆ : ಶರನಗೌಡ ಕಂದಕೂರ

By admin

ಜೆಡಿಎಸ್ ಯಾದಗಿರಿ ನೂತನ ಜಿಲ್ಲಾಧ್ಯಕ್ಷರಾಗಿ ಸುಭಾಷ ಕಟಕಟಿ ಆಯ್ಕೆ

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಜೆಡಿಎಸ್ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ಸುಭಾಷ ಕಟಕಟಿಯವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆದೇಶ ಹೊರಡಿಸಿದ್ದು, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರು ಆದೇಶ ಪತ್ರವನ್ನು ನೀಡಿದರು.

ಆದೇಶ ಪತ್ರ ನೀಡಿದ ಶಾಸಕ ಶರಣಗೌಡ ಕಂದಕೂರ ಮಾತನಾಡಿ, ಸುಭಾಷ ಕಟಕಟೆಯವರು ಕಂದಕೂರ ಕುಟುಂಬದೊಂದಿಗೆ ದಶಕಗಳಿಂದಲೂ ಹಲವು ಸಂಪರ್ಕದಲಿದ್ದು, ಪಕ್ಷನಿಷ್ಠೆಗೆ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ದೊರಕಿದೆ ಎಂದು ಹೇಳಿದರು.

ಯಾದಗಿರಿ ಜಿಲ್ಲೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಮೇಲ್ವರ್ಗದ ವ್ಯಕ್ತಿಗಳಿಗೆ ತಮ್ಮ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿವೆ. ನಮ್ಮ ಪಕ್ಷದಿಂದ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಬೇಕು ಎನ್ನುವ ದೃಷ್ಟಿಯಿಂದ ಹಿಂದುಳಿದ ವರ್ಗದ ಕೋಲಿ ಸಮಾಜದ ಸುಭಾಷ ಕಟಕಟಿಯವರನ್ನು ಆಯ್ಕೆ ಮಾಡಲಾಗಿದೆ.

ನಮ್ಮ ಪಕ್ಷ ಪ್ರತಿಯೊಂದು ಸಮಾಜಕ್ಕೆ ಆದ್ಯತೆ ನೀಡುತ್ತದೆ, ಹಿಂದುಳಿದ ವರ್ಗವನ್ನು ಮೇಲತ್ತಬೇಕು ಎನ್ನುವ ದೃಷ್ಟಿಕೋನ ನಮ್ಮ ನಾಯಕರದ್ದಾಗಿದೆ ಎಂದು ಹೇಳಿದರು.

ನೂತನ ಜಿಲ್ಲಾಧ್ಯಕ್ಷರು ಜಿಲ್ಲೆಯಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸುವುದರೊಂದಿಗೆ, ಜಿಲ್ಲೆಯಾದ್ಯಂತ ಕನಿಷ್ಠ 3 ನೋಂದಾಯಿಸಬೇಕು, ಲಕ್ಷ ಸದಸ್ಯರನ್ನು ಜಿಲ್ಲೆಯಲ್ಲಿ ಅತಿಹೆಚ್ಚು ಸದಸ್ಯತ್ವ ಅಭಿಯಾನವನ್ನು ಮಾಡುವದರೊಂದಿಗೆ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು. ಮುಂಬರುವ ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪಕ್ಷವನ್ನು ಸದೃಢಗೊಳಿಸಿ ಅತಿಹೆಚ್ಚು ನಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಈಗಿನಿಂದಲೇ ಪಕ್ಷ ಸಂಘಟೆಗೆ ಒತ್ತು ನೀಡಬೇಕು ಎಂದು ಹೇಳಿದರು.

ಸುಭಾಷ ಕಟಕಟಿಯವರು ಅಪ್ಪಾಜಿ ಕಾಲದಿಂದಲೂ ಕೂಡ ನಮ್ಮೊಂದಿಗಿದ್ದು, ಅವರು ಪಕ್ಷ ನಿಷ್ಠೆಯೊಂದಿಗೆ ನಮ್ಮ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಪಕ್ಷ ಸಂಘಟನೆಯಲ್ಲಿ ಅವರ ಪಾತ್ರವು ಇದೆ. ಅದರ ಜೊತೆಗೆ ಕಳೆದ ಬಾರಿ ಯಾದಗಿರಿ ಜಿಲ್ಲಾ ಪಂಚಾಯತಿಗೆ ಜೆಡಿಎಸ್‌ನ ಏಕೈಕ ಸದಸ್ಯರಾಗಿ ಅವರ ಧರ್ಮಪತ್ನಿ ಆಯ್ಕೆಯಾಗಿದ್ದರು ಎಂದು ಹೇಳಿದರು.