
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಭ್ರಷ್ಟಾಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ಸ್ಪಂದಿಸಿ ಅನಗತ್ಯ ಕಾಲಹರಣ ಮಾಡದೇ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಕೆಲಸ ಮಾಡುವ ಪತ್ರಿಯೊಬ್ಬ ಅಧಿಕಾರಿಯು ಸೇವಾ ಮನೋಭಾವದೊಂದಿಗೆ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು ಎಂದು ಯಾದಗಿರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪಿ.ಕೆ ಉಮೇಶ ಅವರು ತಿಳಿಸಿದ್ದಾರೆ.
2024ರ ಅಕ್ಟೋಬರ್ 28ರ ಸೋಮವಾರ ರಂದು ಯಾದಗಿರಿ ತಹಸೀಲ್ ಕಾರ್ಯಲಯದ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಯಾದಗಿರಿ ವತಿಯಿಂದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಯಿತು.
2024ರ “Say No To Corruption; Commit to the Nation” ಧ್ಯೇಯ ವಾಕ್ಯದೊಂದಿಗೆ ಭ್ರಷ್ಟಾಚಾರದ ವಿರುದ್ದ ಜಾಗೃತಿ ಅರಿವು ಸಪ್ತಾಹ-2024 ಆಚರಣೆ ಮೂಲಕ ಪ್ರತಿಜ್ಞಾ ವಿಧಿ ಬೋಧನೆ ಮಾಡಿ ಭ್ರಷ್ಟಾಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಈ ಕಛೇರಿಯು ಜನಸಾಮಾನ್ಯರ ಕಛೇರಿಯಾಗಿದ್ದು ಪ್ರತಿಯೊಬ್ಬ ವ್ಯಕ್ತಿಯು ಒಂದಿಲ್ಲೊAದು ಕಾರಣಕ್ಕಾಗಿ ತಹಸೀಲ್ದಾರರ ಕಛೇರಿಗೆ ಸಂರ್ಪಕಿಸಬೇಕಾಗುತ್ತದೆ ಕಾರಣ ಪ್ರತಿ ಸಾರ್ವಜನಿಕರೊಂದಿಗೆ ಸೌಜನ್ಯತೆಯಿಂದ ಸ್ಪಂದಿಸಬೇಕು.
ಅನಗತ್ಯ ಕಾಲಹರಣ ಮಾಡದೇ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವಂತೆ ಹಾಗೂ ಕೆಲಸ ಮಾಡುವ ಪತ್ರಿಯೊಬ್ಬ ಅಧಿಕಾರಿಯು ಸೇವಾ ಮನೋಭಾವದೊಂದಿಗೆ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕವಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಲಾಯಿತು. ಹಿರಿಯ ಉಪನೋಂದಣಾಧಿಕಾರಿಗಳ ಕಾರ್ಯಲಯಕ್ಕೆ ಭೇಟಿ ನೀಡಿ ಸದರಿ ಕಛೇರಿಯಲ್ಲಿ ಹಾಜರಿದ್ದ ಅಧಿಕಾರಿ & ಸಿಬ್ಬಂದಿಯವರಿಗೆ “ಭ್ರಷ್ಟಾಚಾರ ವಿರುದ್ಧ ಅರಿವು ಸಪ್ತಾಹ-2024’ ಕಾರ್ಯಕ್ರಮದ ಪ್ರತಿಜ್ಞಾವಿಧಿ ಭೋಧನೆ ಮಾಡಿಸಲಾಯಿತು. ನಂತರ ಅನಗತ್ಯ ಕಾಲಹರಣ ಮಾಡದೇ ನಿಗಧಿತ ಅವಧಿಯಲ್ಲಿ ಸೇವೆ ನೀಡಲು ಹಾಗೂ ಭ್ರಷ್ಟಾಚಾರ ಮುಕ್ತ ಪದ್ದತಿಯನ್ನು ಮೈಗೂಡಿಸಿಕೊಳ್ಳುವಂತೆ ಸೂಚಿಸಲಾಯಿತು. ಮತ್ತು ಕಛೇರಿಗೆ ಬರುವ ಸಾರ್ವಜನಿಕರಿ ತೊಂದರೆ ಯಾಗದಂತೆ ಕರ್ತವ್ಯ ನಿರ್ವಹಿಸಬೇಕೆಂದು ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಯಾದಗಿರಿ ತಹಸೀಲ್ದಾರರಾದ ಸುರೇಶ ಅಂಕಲಗಿ ಹಾಗೂ ತಹಸೀಲ್ ಕಾರ್ಯಲಯದ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.
