
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಸಗರನಾಡು ಭಾಗದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಹೆಸರು ಮಾಡಿರುವ ಯಾದಗಿರಿ ಸಹಕಾರಿ ಸಂಘಗಳ ನಿವೃತ್ತ ಉಪ ನಿಬಂಧಕರಾದ ಕೆಂಚಪ್ಪ ನಗನೂರ ಅವರು ಪ್ರಸ್ತುತ ೨೦೨೩-೨೪ ನೇ ಸಾಲಿನ ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿ.ಬೆಂಗಳೂರ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿಗೆ ಈ ಬಾರಿ ನಿವೃತ್ತ ಉಪ ನಿಬಂಧಕರಾದ ಕೆಂಚಪ್ಪ ನಗನೂರ ಅವರನ್ನು ಆಯ್ಕೆ ಮಾಡಿದೆ.
ಇದೇ ನ.೧೭ ರಂದು ಹುಬ್ಬಳ್ಳಿ ಬೈಪಾಸ್ ರಸ್ತೆ, ತೋಟಗಾರಿಕಾ ವಿಶ್ವವಿದ್ಯಾಲಯ ಪಕ್ಕದ ಮೈದಾನ ಬಾಗಲಕೋಟದಲ್ಲಿ ನಡೆಯುವ ೭೧ ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರು, ಸಹಕಾರ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದ್ದಾರೆ.
ಸಹಕಾರಿ ಕ್ಷೇತ್ರದಲ್ಲಿ ನಗನೂರ ಅವರ ಅನುಪಮ ಸೇವೆ ಗುರುತಿಸಿ ಮಹಾ ಮಂಡಳಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸುತ್ತಿದೆ.
ಹರ್ಷಃ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾದ ಕೆಂಚಪ್ಪ ನಗನೂರ ಅವರಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ, ಜಿಲ್ಲಾ ಯೂನಿಯನ್ ಅಧ್ಯಕ್ಷ ವಿಶ್ವನಾಥರಡ್ಡಿ ದರ್ಶನಾಪುರ, ಡಿಸಿಸಿ ಬ್ಯಾಂಕ್ ನಿರ್ದೇಶಕ ಗುರುನಾಥರಡ್ಡಿ ಪಾಟೀಲ್, ಎಂ. ನಾರಾಯಣ, ಬಸವರಾಜ ಹಿರೇಮಠ, ಬಸವರಾಜ ಅತ್ನೂರು ಸೇರಿದಂತೆ ಹಲವಾರು ಗಣ್ಯರು ಸಂತಸ ವ್ಯಕ್ತಪಡಿಸಿದ್ದಾರೆ. ಯೋಗ್ಯ ವ್ಯಕ್ತಿಗೆ ಪ್ರಶಸ್ತಿ ದೊರಕಿದೆ ಎಂದು ಅಭಿನಂದನೆ ಸಲ್ಲಿಸಿದ್ದಾರೆ.
