ಭಗವಾನ್ ಬಿರ್ಸಾಮುಂಡಾ ಜಯಂತಿ ಆಚರಣೆ

By admin
 

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಭಾರತ ಸರ್ಕಾರ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಯಾದಗಿರಿ ಇವರ ವತಿಯಿಂದ ಧರ್ತಿ ಆಬಾ ಭಗವಾನ್ ಬಿರ್ಸಾಮುಂಡಾ ರವರ 150ನೇ ಜನ್ಮ ದಿನಾಚರಣೆಯನ್ನು  ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರ ಉಪಸ್ಥಿತಿಯಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು,

ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ ಬೇವಿನ ಹಳ್ಳಿ ಹಾಗೂ ಸುರಪುರ ಶಾಲೆಯ ಮಕ್ಕಳು ಬುಡಕಟ್ಟು ಜನಾಂಗದ ವೇಷಭೂಷಣ ಧರಿಸಿ ವಿಶೇಷ ನೃತ್ಯ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದರು.

ನಂತರ ಕೃಷಿ ಇಲಾಖೆವತಿಯಿಂದ ಮಣ್ಣು ಪರೀಕ್ಷೆ ಪತ್ರ, ವಿತರಣೆ ಮಾಡಲಾಯಿತು ಮತ್ತು ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ತಪಾಸಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವಿಶ್ ಒರಡಿಯಾ, ಸ್ಥಳಿಯ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಇನ್ನಿತರರೂ ಉಪಸ್ಥಿತರಿದ್ದರು.