ಬಿಜೆಪಿ ಜಿಲ್ಲಾ ಘಟಕದಿಂದ ಕನಕದಾಸರ ಜಯಂತಿ ಆಚರಣೆ 

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಕನಕದಾಸ ಜಯಂತಿಯ ನಿಮಿತ್ತ ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಅವರು ಕನಕದಾಸರು ತಮಗೆ ದೊರೆತ ಸಂಪತ್ತನ್ನು ಬಡವರಲ್ಲಿ ಹಂಚಿದ ಮಹಾದಾನಿ. ಜಾತಿ ರಹಿತವಾದ ಸಮಸಮಾಜ ನಿರ್ಮಾಣವಾಗಬೇಕೆಂದು ಕನಸು ಕಂಡಿದ್ದರು. ತಮ್ಮ ಜೀವನದುದ್ದಕ್ಕೂ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಪ್ರಯತ್ನಿಸಿದ್ದ ಪರಿವರ್ತನೆಯ ಹರಿಕಾರರು ಎಂದು ಬಣ್ಜೆಸಿದರು.
ಹಿರಿಯ ಮುಖಂಡ ರಾಚಣ್ಣಗೌಡ ಮುದ್ನಾಳ ಮಾತನಾಡಿದ ಅವರು ಕೀರ್ತನೆಗಳ ಮೂಲಕ ಜನರಲ್ಲಿದ್ದ ಮೌಢ್ಯಗಳನ್ನು ಹೋಗಲಾಡಿಸಲು ಶ್ರಮಿಸಿದ್ದ ದಾಸಶ್ರೇಷ್ಠ ಕನಕದಾಸರ ಚಿಂತನೆಗಳು ನಮ್ಮೆಲ್ಲರಿಗೂ ದಾರಿದೀಪವಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಉಪಾಧ್ಯಕ್ಷ ಮಾರುತಿ ಕಲಾಲ್, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಜಿಲ್ಲಾ ಕಾರ್ಯದರ್ಶಿ ಮಲ್ಲಿಕಾರ್ಜುನ ಹೊನಿಗೇರಿ, ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೆರಿ, ಮೋನೇಶ ಬೆಳಿಗೇರ, ಶಕುಂತಲಾ ಜಿ, ಭೀಮಬಾಯಿ ಶೆಂಡೀಗಿ, ಮಲ್ಲಿಕಾರ್ಜುನ ಕಟ್ಟಿಮನಿ, ರಮೇಶ ರಾಠೋಡ, ಮಹಾದೇವಪ್ಪ ಗಣಪುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.