ವಿಶ್ವ ವಿಕಲಚೇತನ ದಿನಾಚರಣೆ ಕಾರ್ಯಕ್ರಮ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ವಿಶ್ವ ವಿಕಲಚೇತನ ದಿನಾಚರಣೆ ಪ್ರಯುಕ್ತ 2024ರ ನವೆಂಬರ್ 21ರ ಗುರುವಾರ ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕ್ರೀಡೆ ಹಾಗೂ ಸಂಸ್ಕೃತ ಸ್ಪರ್ಧೆಗಳನ್ನು ಆಯೋಜಿಸಿದ್ದು, ವಿಕಲಚೇತನರು ಅಪರ ಜಿಲ್ಲಾಧಿಕಾರಿ ಶ್ರೀ ಶರಣಪ್ಪ ಕೋಟೆಪ್ಪಗೊಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ವೀರಣ್ ಗೌಡ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ರಾಜು ಬಾವಿಹಳ್ಳಿ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳಾದ ಶರಣಗೌಡ ಪಾಟೀಲ್ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ ವಿಕಲಚೇತನ ವ್ಯಕ್ತಿಗಳು ಸಂಘದವರು ಜಿಲ್ಲೆ ಎಲ್ಲ ವಿವಿಧ ಸಂಘ ಸಂಸ್ಥೆಯವರು ಭಾಗವಹಿಸಿದರು.