ಉಪ ಚುನಾವಣೆಯಲ್ಲಿ ಕೈಗೆ ಭರ್ಜರಿ ಜಯ ಜಿಲ್ಲಾ ಕಾಂಗ್ರೆಸ್ ನಿಂದ ವಿಜಯೋತ್ಸವ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ರಾಜ್ಯದ ಮೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಶನಿವಾರ ನಗರದ ಸುಭಾಷ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಸಲಾಯಿತು.

ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳು ಫಲದಾಯಕವಾಗಿವೆ ಎಂಬುದಕ್ಕೆ ಈ ಉಪ ಚುನಾವಣೆ ಫಲಿತಾಂಶ ಸಾಕ್ಷಿ. ಬಿಜೆಪಿಯವರು ಎನೆಲ್ಲಾ ಕುತಂತ್ರ ಮಾಡಿದರೂ ಮತದಾರ ಅದಕ್ಕೆ ಬೆಲೆ ಕೊಡದೆ ತಕ್ಕ ಪಾಠ ಕಲಿಸಿದ್ದಾನೆ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಸತತ ಹೋರಾಟದಿಂದ ಇಂದು ನಮ್ಮ ಮೂರು ಅಭ್ಯರ್ಥಿಗಳು ಭಾರಿ ಬಹುಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ಹೇಳಿದರು.

ಈ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಯಾವ ತಂತ್ರಗಳು ನಡೆದಿಲ್ಲ. ಜನತೆ ನಮ್ಮ ಸರ್ಕಾರದ ಯೋಜನೆಗಳ ಮೇಲೆ ವಿಶ್ವಾಸವಿಟ್ಟು ಮತ ನೀಡಿದ್ದಾರೆ. ಬರುವ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ಜಿಲ್ಲಾಧ್ಯಕ್ಷ ಬಸವರೆಡ್ಡಿ‌ಅನಪೂರ್, ಡಾ. ಭೀಮಣ್ಣಮೇಟ್ಟಿ, ಬಸ್ಸುಗೌಡ ಬಿಳ್ಹಾರ್, ಮಲ್ಲಿಕಾರ್ಜುನ ಈಟೆ, ಲಕ್ಷೀಮರೆಡ್ಡಿ, ಬಾಬುರಾವ ಕಾಡ್ಲೂರ್, ಚನ್ನಕೇಶವ ಬಾಣತಿಹಾಳ, ಹಣಮಂತ ನಾಯಕ, ಸುರೇಶ ಮಡ್ಡಿ, ಶರಣ ಬಸವ ಕುರಕುಂದಿ, ಶಿವು ಬೆಳಗುಂದಿ, ರಾಘವೇಂದ್ರ ಸಾಹುಕಾರ್, ಅಮರೇಶ ಜಾಕಾ ಸೇರಿದಂತೆ ಮತ್ತಿತರರು ಕಾರ್ಯಕರ್ತರು ಇದ್ದರು.