
ಬೀದಿ ಬದಿ ವ್ಯಾಪಾರಸ್ಥರಿಗೆ ಅರಿವು, ಜಾಗೃತಿ ಮೂಡಿಸುವ ಕಾರ್ಯಕ್ರಮ
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ರಸ್ತೆ ಬದಿ ವ್ಯಾಪಾರಸ್ಥರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ವ್ಯಾಪಾರ ವಹಿವಾಟು ನಡೆಸಿ ಸ್ವಚ್ಛತೆಗೆ ಆದ್ಯತೆ ನೀಡಬೇಕು, ನಮ್ಮ ಯಾದಗಿರಿ ನಗರ ಸುಂದರವಾಗಿಸಬೇಕು. ಎಲ್ಲರೂ ಆರೋಗ್ಯಕರವಾಗಿರಬೇಕು ಎಂಬುದು ನಮ್ಮ ಇಚ್ಚಾಶಕ್ತಿಯೂ ಆಗಿದೆ ಎಲ್ಲರೂ ನಗರಸಭೆಗೆ ಕೈಜೋಡಿಸಿ ಸಹಕರಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪೂರ ಅವರು ಮನವಿ ಮಾಡಿದರು.
ನಗರಸಭೆ, ದೀನ್ ದಯಾಳ್ ಅಂತ್ಯೋದಯ ರಾಷ್ಟಿçÃಯ ಜೀವನೋಪಾಯ ಇಲಾಖೆ (ಡೇ-ನಲ್ಮಾ ಶಾಖೆ) ವತಿಯಿಂದ ನಗರದ ವಾಲ್ಮೀಕಿ ಭವನದ ಸಭಾಂಗಣದಲ್ಲಿ ಬೀದಿ ವ್ಯಾಪಾರಸ್ಥರಿಗೆ ಅರಿವು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೀದಿಬದಿ ವ್ಯಾಪಾರಿಗಳಿಂದ ಟ್ರಾಫಿಕ್ ಸಮಸ್ಯೆಯಾಗಿ ಪ್ರಮುಖ ಬೀದಿಗಳಲ್ಲಿ ಮತ್ತು ಇತರೆ ಕಡೆ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ ಎಂದು ಜನರು ನಗರಸಭೆಗೆ ದೂರು ಸಲ್ಲಿಸುತ್ತಿದ್ದಾರೆ. ಪಾದಚಾರಿಗಳಿಗೆ ಮತ್ತು ವಾಹನ ಚಾಲಕರಿಗೆ ಸರಳ ಸಂಚಾರಕ್ಕೆ ಅನೂಕೂಲ ಮಾಡಿಕೊಟ್ಟರೆ ಅಪಘಾತಗಳು ಸಂಭವಿಸುವುದು ನಿಲ್ಲುತ್ತದೆ ಹೀಗಾಗಿ ನಗರಸಭೆ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆಯೊಂದಿಗೆ ಎಲ್ಲರೂ ಸಹಕಾರ ನೀಡಬೇಕು. ಬೀದಿ ಬದಿ ವ್ಯಾಪಾರಿಗಳು ನಮ್ಮ ಕುಟುಂಬವಿದ್ದAತೆ, ಅಲ್ಲದೇ ವ್ಯಾಪಾರಿಗಳು ಯಾರಿಗೂ ದುಡ್ಡು ಕೊಡುವ ಅವಶ್ಯಕತೆ ಇರುವುದಿಲ್ಲ. ಒಂದು ವೇಳೆ ಯಾರಾದರೂ ದುಡ್ಢು ತೆಗೆದುಕೊಂಡರೆ ನಮ್ಮ ಗಮನಕ್ಕೆ ತರಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಪ್ಲಾಸ್ಟಿಕ್ ಮುಕ್ತ ನಗರವಾಗಿಸಬೇಕು ಮತ್ತು ಮನೆಯ ಸುತ್ತಮುತ್ತಲು ಸ್ವಚ್ಛತೆ ಕಾಪಾಡಿಕೊಳ್ಳುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಪಿ .ಎಂ. ಸ್ವ-ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಮೊದಲನೆ ಹಂತದಲ್ಲಿ 10 ಸಾವಿರ ರೂಗಳಂತೆ ಒಟ್ಟು 1358 ಫಲಾನುಭವಿಗಳಿಗೆ, ಎರಡನೇ ಹಂತದಲ್ಲಿ 20 ಸಾವಿರ ರೂಗಳಂತೆ 636 ಫಲಾನುಭವಿಗಳಿಗೆ, ಮೂರನೇ ಹಂತದಲ್ಲಿ 50 ಸಾವಿರ ರೂಗಳಂತೆ 213 ಫಲಾನುಭವಿಗಳಿಗೆ ಸಾಲ ಕೊಡಿಸಲಾಗಿದೆ ಎಂದು ಅವರು ತಿಳಿಸಿದರು.
ನಗರಸಭೆಯ ಪೌರಾಯುಕ್ತ ರಜನಿಕಾಂತ ಶೃಂಗೇರಿ ಮಾತನಾಡಿ, ವ್ಯಾಪಾರಸ್ಥರು ನಿಗದಿತ ಸ್ಥಳದಲ್ಲಿಯೇ ವ್ಯಾಪಾರ ಮಾಡಿ ನಗರಸಭೆಗೆ ಸಹಕಾರ ನೀಡಬೇಕು. ಬೀದಿ ಬದಿ ವ್ಯಾಪಾರಿಗಳಿಗೆ ಇಲ್ಲಿಯವರೆಗೆ ಒಟ್ಟು 1784 ಗುರುತಿನ ಚೀಟಿಯನ್ನು ನಗರಸಭೆಯಿಂದ ವಿತರಿಸಲಾಗಿದೆ. ವ್ಯಾಪಾರವನ್ನೇ ನಂಬಿಕೊAಡಿರುವ ಕುಟುಂಬಗಳ ಇದರ ಸದುಪಯೋಗ ಪಡೆದುಕೊಂಡು ನೆಮ್ಮದಿಯ ಬದುಕನ್ನು ರೂಪಿಸಿಕೊಳ್ಳಲು ಮುಂದಾಗಬೇಕು.
ನಗರದಲ್ಲಿ ಸ್ವಚ್ಛ ಹಾಗೂ ಉತ್ತಮವಾದ ವಸ್ತುಗಳನ್ನು ಮಾರಾಟ ಮಾಡಬೇಕು. ಸಾರ್ವಜನಿಕರಿಗೆ, ಸಾರಿಗೆ ಸಂಚಾರಕ್ಕೆ ಯಾವುದೇ ಅಡೆತಡೆ ಆಗದಂತೆ ತಮ್ಮ ವ್ಯಾಪಾರ ಮಾಡಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆಯ ಸಮುದಾಯ ಸಂಘಟನಾಧಿಕಾರಿ ಭೀಮಣ್ಣ ಕೆ ವೈದ್ಯ ಅವರು ಪ್ರಾಸ್ತಾವಿಕ ಮಾತನಾಡಿದರು. ನಗರಸಭೆ ಉಪಾಧ್ಯಕ್ಷೆ ರುಖಿಯಾಬೇಗಂ, ಮಾಜಿ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್, ನಾಮನಿರ್ದೇಶಿತ ಸದಸ್ಯ ವೆಂಕಟೇಶ, ಪೊಲೀಸ್ ಇಲಾಖೆಯ ರವಿ ರಾಠೋಡ್, ಆರೋಗ್ಯ ಇಲಾಖೆಯ ಡಾ.ಅನಿಲಕುಮಾರ, ಆರೋಗ್ಯ ನೀರೀಕ್ಷಕರಾದ ಕು. ಶರಣಮ್ಮ ಶ್ರೀ ಮಂಜುನಾಥ, ಶ್ರೀ ಮಂಜುನಾಥ, ಶ್ರೀ ಸಿದ್ದಾರ್ಥ್, ಸಿ.ಆರ್.ಪಿ ಗಳಾದ ಸಾಬಮ್ಮ, ಅವ್ವಮ್ಮ, ಪ್ರೇಮಾ ಸೇರಿದಂತೆ ಬೀದಿ ಬದಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.
