
ಸಿಟಿಜನ್ಸ ಫಾರ್ ಸೋಷಿಯಲ್ ಜಸ್ಟ್ ವತಿಯಿಂದ ಸಂವಿಧಾನ ಸನ್ಮಾನ ಅಭಿಯಾನ
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಸ್ವಾತಂತ್ರ್ಯ ಬಂದಾಗಿನಿಂದ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷವು ಹಲವಾರು ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದೆ. ಅಲ್ಲದೆ, ಸಂವಿಧಾನದ ದುರುಪಯೋಗ ಪಡಿಸಿಕೊಂಡು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಆಗಿದೆ ಎಂಬುದನ್ನು ದೇಶ ರಾಜ್ಯದ ಜನರು ಮರೆತಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಹೇಳಿದರು.
ಸಂವಿಧಾನ ದಿನಾಚರಣೆಯ ಪ್ರಯುಕ್ತ ನಗರದ ಹೊರ ವಲಯದ ನಿವೇದಿತ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ಸಂವಿಧಾನ ಸನ್ಮಾನ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಹಿಂದೆ ಕಾನೂನು ದಿನವನ್ನಾಗಿ ಇದನ್ನು ಆಚರಿಸಲಾಗುತ್ತಿತ್ತು. ಇದನ್ನು ಸಂವಿಧಾನ ಸಮರ್ಪಣಾ ದಿನವಾಗಿ ಅರ್ಥಪೂರ್ಣವಾಗಿ ಆಚರಿಸುವ ಅಭಿಲಾಷೆ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರದ್ದು ಎಂದರು.
ನ.26ರಿಂದ ಜನವರಿ 26ರವರೆಗೆ 2 ತಿಂಗಳುಗಳ ಕಾಲ ದೇಶಾದ್ಯಂತ ಸಂವಿಧಾನ ಸನ್ಮಾನ ಅಭಿಯಾನ ಆಚರಿಸಲಾಗುತ್ತಿದೆ. ಸಂವಿಧಾನ ಒಂದು ಧರ್ಮಗ್ರಂಥ ಎಂದ ಅವರು, ಸಂವಿಧಾನಕ್ಕೆ ಅವಹೇಳನ ಮಾಡಿದ ಕಾಂಗ್ರೆಸ್ಸಿಗರು ಸಂವಿಧಾನದ ರಕ್ಷಕರು, ಸಂವಿಧಾನ ಪ್ರತಿಪಾದಕರಂತೆ ಕಪಟ ನಾಟಕವನ್ನು ಹಲವಾರು ದಶಕಗಳಿಂದ ನಿರಂತರವಾಗಿ ಮಾಡುತ್ತ ಬಂದಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷದವರು ಸಂವಿಧಾನಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ, ಸಂವಿಧಾನಕ್ಕೆ ಗೌರವ ತರುವ ನಿಟ್ಟಿನಲ್ಲಿ, ಸಂವಿಧಾನವನ್ನು ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಗೌರವದಿಂದ ಕಾಣುವ ಮತ್ತು ಪಾಲಿಸುವ ಕಡೆ ಬಿಜೆಪಿ ಮುಂದಾಗಿದೆ. ಈ ಆಚರಣೆಯು ಕೇವಲ ನವೆಂಬರ್ 26ಕ್ಕೆ ಸೀಮಿತ ಆಗಬಾರದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ ಮಾತನಾಡಿದ ಅವರು ಸ್ವಾತಂತ್ರ್ಯ ನಂತರದಲ್ಲಿ ಸಂವಿಧಾನ ರಚನೆ ದೊಡ್ಡ ಸವಾಲಾಗಿತ್ತು. ಆಗ ಸಂವಿಧಾನ ಸಮಿತಿಯು ಸುದೀರ್ಘ- ಎಲ್ಲ ಆಯಾಮಗಳಲ್ಲಿ ಚರ್ಚೆ ಮಾಡಿ, ಬಾಬಾಸಾಹೇಬ ಅಂಬೇಡ್ಕರರ ಮಾನವೀಯ ತತ್ವಗಳನ್ನು ಸೇರಿಸಿದ್ದರಿಂದ ನಮ್ಮ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ ಎನಿಸಿದೆ ಎಂದರು.
ಈ ಸಂದರ್ಭದಲ್ಲಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದವರು ಇತಿಹಾಸವನ್ನು ಮರೆಮಾಚಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದ್ದಾರೆ. ಅದನ್ನು ತೊಡೆದು ಹಾಕಿ, ಡಾ. ಬಾಬಾಸಾಹೇಬ ಅಂಬೇಡ್ಕರರ ನೇತೃತ್ವದಲ್ಲಿ ರಚಿಸಿದ ಸಂವಿಧಾನಕ್ಕೆ ಸಂಪೂರ್ಣ ಗೌರವ ತಂದು ಕೊಡುವ ಪ್ರಾಮಾಣಿಕ ಕೆಲಸವನ್ನು ನರೇಂದ್ರ ಮೋದಿಯವರು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ.ಅಂಬೇಡ್ಕರರ ಪರಿಶ್ರಮ, ಬೆವರಿನ ಫಲಶ್ರುತಿಯ ಫಲವಾಗಿ ಸಮಾನತೆ, ಸ್ವಾವಲಂಬನೆ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂವಿಧಾನದ ಮೂಲಕ ಕೊಡಲಾಗಿದೆ. ಸಂವಿಧಾನವು ಪ್ರಜಾಪ್ರಭುತ್ವ ವ್ಯವಸ್ಥೆಯ ಪಾಲಿಗೆ ಒಂದು ಧರ್ಮಗ್ರಂಥ ಎಂದು ವಿಶ್ಲೇಷಿಸಿದರು. ನಮ್ಮೆಲ್ಲರ ನೇತೃತ್ವದಲ್ಲಿ ಸಂವಿಧಾನಕ್ಕೆ ಗೌರವ ಕೊಡುವ ಕೆಲಸ ಆಗಬೇಕಿದೆ ಎಂದರು.
ಈ ಸಂದರ್ಭದಲ್ಲಿ ರವಿಚಂದ್ರ ಕ್ರಾಂತಿಕಾರ ಅವರು ಸವಿಧಾನ ಪೀಠಿಕೆ ಪಟ್ಟಣ ಮಾಡಿಸಿದರು ಮತ್ತು ಉಪನ್ಯಾಸಕ ಮೌನೇಶ್ ಅಯ್ಯಾಳ ಅವರು ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ನಿವೇದಿತಾ ಶಿಕ್ಷಣ ಸಂಸ್ಥೆ ಅಧ್ಯಕ್ಷ ೠಖಂಡಪ್ಪ ದಾಸನ,ದೇವಿಂದ್ರನಾಥ ನಾದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರು ಕಾಮಾ ಮತ್ತು ಮೇಲಪ್ಪ ಗುಳಗಿ, ಜಿಲ್ಲಾ ವಕ್ತಾರ ಹಣಮಂತ ಇಟಗಿ,ಚನ್ನಾರಡ್ಡಿ ಬಿಳಾರ,ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ,ಬಸವರಾಜ ವಿಭೂತಹಳ್ಳಿ,ಸದಾಶಿವಪ್ಪಗೌಡ ರೊಟ್ನಡಗಿ,ಮಹಾದೇವಪ್ಪ ಯಲಸತ್ತಿ,ಭೀಮಾಶಂಕರ ಬಿಲ್ಲವ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
