
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಪ್ರಧಾನಿ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯ ಹಾಗೂ 28 ನವೋದಯ ವಿದ್ಯಾಲಯಗಳನ್ನು ಸ್ಥಾಪಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು, ರಾಜ್ಯಕ್ಕೆ 3 ಕೇಂದ್ರೀಯ ವಿದ್ಯಾಲಯ ಅನುಮೋದ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ ಅವರು ಅಭಿನಂದನೆಗಳ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರು.
ರಾಜ್ಯದಲ್ಲಿ ಯಾದಗಿರಿ ಜಿಲ್ಲೆಯ ಮುದ್ನಾಳ ಗ್ರಾಮ, ಚಿತ್ರದುರ್ಗ ಜಿಲ್ಲೆಯ ಕುಂಚಿಗನಾಲ್ ಮತ್ತು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಈಳರ್ಗಿ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭವಾಗಲಿದೆ. ನಮ್ಮ ಯಾದಗಿರಿಯ ಮುದ್ನಾಳ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪಿಸುವುದಕ್ಕೆ ಅನುಮೋದನೆ ನೀಡಿರುವುದು ಸಂತಸದ ಸಂಗತಿ ಮತ್ತು ಯಾದಗಿರಿ ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಈ ಬಗ್ಗೆ ಶ್ರೀ ರಾಜಾ ಅಮೇಶ್ವರ್ ನಾಯಕ್ ಅವರು ಸಂಸದರಾಗಿದ್ದ ವೇಳೆ ಮನವಿ ಪತ್ರವನ್ನು ಸಲ್ಲಿಸಲಾಗಿತ್ತು ಎಂದು ಹೇಳಿದರು.
