
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಪಂಚಮಸಾಲಿ ಸಮುದಾಯದ 2ಎ ಪ್ರವರ್ಗದ ಮಿಸಲಾತಿಗಾಗಿ ನಡೆಸುತ್ತಿರುವ ಹೋರಾಟದ ತೀರ್ವ ಸ್ಮರೂಪದ ಕುರಿತು ಈ ಮುಂಚೆಯೇ ಸರ್ಕಾರದ ಅರಿವಿಗೆ ಬಂದಿದ್ದರೂ ಯಾವುದೇ ಮುಂಜಾಗ್ರತಾ ಕ್ರಮ ವಹಿಸದೆ ಸರ್ಕಾರ ದುರುದ್ದೇಶಪೂರ್ವಕವಾಗಿ ಚಳುವಳಿಯನ್ನು ಹತ್ತಿಕ್ಕುವ ದುರಾಲೋಚನೆಯಿಂದ ಚಳವಳಿ ನಿರತ ಅಮಾಯಕರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿದೆ ಎಂದು ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದರು.
ಕಳೆದ ಒಂದು ವಾರದಿಂದಲೂ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೋರಾಟದ ಕುರಿತು ಮಾಹಿತಿಗಳನ್ನು ಒದಗಿಸುತ್ತಲೇ ಬಂದಿದ್ದಾರೆ ಈ ಹಂತದಲ್ಲಿ ಪೂಜ್ಯರೊಂದಿಗೆ ಸಕಾರಾತ್ಮಕ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಹುಡುಕುವ ಮಾರ್ಗೋಪಾಯಗಳನ್ನು ಕಂಡುಹಿಡಿಯದೇ ಚಳವಳಿ ತೀವ್ರ ಸ್ಮರೂಪ ಪಡೆಯುತ್ತಿದ್ದಂತೆ ಕಾಂಗ್ರೆಸ್ ಸರ್ಕಾರ ತನ್ನ ಅಸಮರ್ಥ ನಡೆ ತೋರಿಸಿದೆ ಎಂದು ಹೇಳಿದರು. ಕೂಡಲೇ ಸರ್ಕಾರ ಈ ಸಂಬಂಧವಾಗಿ ಬೇಜವಾಬ್ದಾರಿಯಿಂದ ವರ್ತಿಸಿರುವ ಪೋಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಿ, ಅಮಾಯಕರ ಮೇಲೆ ಹಲ್ಲೆ ಆಗಿರುವ ಕುರಿತು ಕ್ಹಮೆಯಾಚಿಸಲಿ. ಮಾರಣಾಂತಿಕ ಪೆಟ್ಟು ತಿಂದವರಿಗೆ ಸೂಕ್ತ ಚಿಕಿತ್ಸೆ ಹಾಗೂ ಪರಿಹಾರವನ್ನು ಒದಗಿಸಲಿ ಎಂದು ಒತ್ತಾಯಿಸಿದ್ದಾರೆ.
