ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ರಾಜ್ಯದ್ಯಂತ ಬಾಣಂತಿಯರ ಹಾಗೂ ನವಜಾತ ಶಿಶುಗಳ ಸಾವುಗಳ ಕುರಿತು ಇಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕು.ಲಲಿತಾ ಅನಪುರ ಅವರು ಕರ್ನಾಟಕದಲ್ಲಿ ಆಡಳಿತದಲ್ಲಿರುವ ಕಾ೦ಗ್ರೆಸ್ ಸರ್ಕಾರ ಆತ್ಮಹತ್ಯೆ ಮತ್ತು ಹತ್ಯೆ ಭಾಗ್ಯವನ್ನು ಕರ್ನಾಟಕ ಜನತೆಗೆ ನೀಡಿದೆ ಹಾಗೂ ಕರ್ನಾಟಕದಲ್ಲಿ ಕಳೆದ 19 ತಿಂಗಳಲ್ಲಿ ಆರು ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯವನ್ನು ಈ ಸರ್ಕಾರ ಕರುಣಿಸಿದೆ, 700ಕ್ಕೂ ಹೆಚ್ಚು ಬಾಣ೦ತಿಯರ ಸಾವು ಕರ್ನಾಟಕದಲ್ಲಿ ಸಂಭವಿಸಿದೆ 1100 ಹೆಚ್ಚು ನವಜಾತ ಶಿಶುಗಳ ಸಾವು ಕಾರಣವಾಗಿರುವುದು ಕರ್ನಾಟಕದ ಕಾ೦ಗ್ರೆಸ್ ಸರ್ಕಾರ ಆರೋಗ್ಯ ಇಲಾಖೆಯಲ್ಲಿ ನಡೆಯುತ್ತಿರುವ ವ್ಯಾಪಕ ಭಷ್ಟಾಚಾರ, ಕಮಿಷನ್ ದಂಧೆಯ ಕಾರಣ ಕಳಪೆ ಔಷಧಗಳು ಹಾಗೂ ವೈದ್ಯಕೀಯ ಸಾಮಗಿಗಳ ಪೂರೈಕೆ ಬಾಣ೦ತಿಯರು ಹಾಗೂ ಹಸುಗೂಸುಗಳಿಗಾಗಿ ಕೇಂದ್ರ ಸರ್ಕಾರದ ಯೋಜನೆಗಳಾದ ಮಾತೃವ೦ದನ ಇಂದ್ರಧನುಷ್ ಮುಂತಾದ ಯೋಜನೆಗಳನ್ನು ರಾಜ್ಯ ಸರ್ಕಾರ ಸರಿಯಾಗಿ ತಲುಪಿಸುತ್ತಿಲ್ಲ.
ಕೇ೦ದ್ರ ಸರ್ಕಾರ ಈ ಯೋಜನೆಗಳಿಗೆ ನೀಡುವ ಅನುದಾನದ ದುರ್ಬಳಕೆ ಮಾಡಿಕೊಂಡಿರುವ ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸ೦ಭವಿಸುತ್ತಿರುವ ಬಾಣ೦ತಿಯರ ವ್ಯಾಪಕ ಸಾವಿನ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಮೋರ್ಚಾ ರಾಜ್ಯದ ಎಲ್ಲಾ ಜಿಲ್ಲಾ ಕೆ೦ದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿಕಟಪುರ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ ಮಾತನಾಡಿದ ಅವರು ಕರ್ನಾಟಕ ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯವಸ್ಥೆ ಸರ್ಕಾರದ ಹೊಣೆಗೇಡಿತನದಿ೦ದ ಸ೦ಪೂರ್ಣ ಹದಗೆಟ್ಟಿದೆ. ಸಿಬ್ಬಂದಿಗಳ ಕೊರತೆಯಿ೦ದ ಸೊರಗುತ್ತಿವೆ. ಅ೦ಬುಲೆನ್ಸ್ ಗಳಿಗೆ ಸರಿಯಾಗಿ ಡೀಸೆಲ್ ಸಿಗುತ್ತಿಲ್ಲ, ಅ೦ಬುಲೆನ್ಸ್ ಡ್ರೈವರ್ ಗಳಿಗೆ ಸರ್ಕಾರ ಸಂಬಳ ನೀಡುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು, ಬಡ್ ಬ್ಯಾ೦ಕ್ ಕೊರತೆ ಇದೆ. ಸರ್ಕಾರ ಎಲ್ಲಾ ಪ್ರಾಥಮಿಕ ಆರೋಗ್ಯ ಕೇ೦ದ್ರ ಹಾಗೂ ಸರ್ಕಾರಿ ಆಸ್ಪತ್ರೆಗಳ.
ವ್ಯವಸ್ಥೆಯನ್ನು ಪರಿಶೀಲಿಸಿ ಸುವ್ಯವಸ್ಥಿತಗೊಳಿಸಬೇಕು ಹಾಗೂ ಮೇಲ್ಜರ್ಜೆಗೇರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್ ಮಾತನಾಡಿದ ಅವರು ಬಾಣ೦ತಿಯರ ಸಾವಿಗೆ ನೈಜ ಕಾರಣಗಳನ್ನು ತಿಳಿದು ಅದನ್ನು ನಿಯಂತ್ರಿಸಲು ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ್ ರಾಜೀನಾಮೆ ನೀಡಲು ಆಗ್ರಹಿಸಿದ್ದಾರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ವೀಣಾ ಮೋದಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ, ಮಹಿಳಾ ಮೋರ್ಚಾ ನಗರ ಮಂಡಲ ಅಧ್ಯಕ್ಷೆ ಭೀಮಬಾಮಿ ಶೇಂಡಿಗಿ, ಶಕುಂತಲಾ ಗುಜ್ಜಲೂರು, ನಗರಸಭೆ ಉಪಾಧ್ಯಕ್ಷೆ ರುಕೀಯ ಬೇಗಂ, ನಗರಸಭೆ ಸದಸ್ಯೆ ಪ್ರಭಾವತಿ ಕಲಾಲ ಮತ್ತು ವಿಜಯಲಕ್ಷ್ಮಿ ನಾಯಕ, ಸಾಬಣ್ಣ ನಾಯಕ,ಆಶಾ ರಾಜು,ಬಾಲ್ಲಮ್ಮ,ಮಮತಾ ಜಾದವ,ಮುನಿ ಬೇಗಂ, ಅನಿಲ್ ಕರಾಟೆ ಸೇರಿದಂತೆ ಮಹಿಳಾ ಮೋರ್ಚಾ ಪದಾಧಿಕಾರಿಗಳ ಮತ್ತು ಕಾರ್ಯಕರ್ತರದ್ದರು.
