ಸಚಿವ ಶ್ರೀ ಶರಣಬಸಪ್ಪ ದರ್ಶನಾಪುರ ಅವರ ಜಿಲ್ಲಾ ಪ್ರವಾಸ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪುರ ಅವರು ಇದೇ ಜನವರಿ 6 ರಂದು ಬೆಳಿಗ್ಗೆ 10 ಗಂಟೆಗೆ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಲೆಕ್ಚರ್ ಹಾಲ್-3 ರಲ್ಲಿ 2024-25ನೇ ಸಾಲಿನ ಸರ್ಕಾರಿ ಶುಶ್ರೂಷಾ ಮಹಾವಿದ್ಯಾಲಯ ದೀಪಧಾರೆ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ, ರಕ್ತ ನಿಧಿ ಕೇಂದ್ರ ಹಾಗೂ ಲಾಂಡ್ರಿ ಬ್ಲಾಕ್ ಕಟ್ಟಡ ಉದ್ಘಾಟಿಸುವರು.

ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುರಪುರ ತಾಲೂಕಿನ ಖಾನಾಪುರ ಗ್ರಾಮದ ಜಾಮೀನು ನಂ.102/ಪೂ1 102/ಪೂ2 ಕುರಿತ ಸಭೆಯಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12 ಗಂಟೆಗೆ  ಸೈದಾಪುರ ವಲಯ (ಕರಿಬೆಟ್ಟ ಕ್ರಾಸ್) ಇಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1.30 ಗಂಟೆಗೆ ಯಾದಗಿರಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳನ್ನು ವಿಚಾರಿಸುವರು. ನಂತರ ಕಲ್ಬುರ್ಗಿಯಲ್ಲಿ ವಾಸ್ತವ್ಯ ಮಾಡುವರು.

ಜನವರಿ 7 ರಂದು ಬೆಳಿಗ್ಗೆ 11 ಗಂಟೆಗೆ ಶಹಾಪೂರ ದಲ್ಲಿ ನಗರಸಭೆ ಕಚೇರಿ ಸಭಾಂಗಣದಲ್ಲಿ ಶಹಾಪೂರ ನಗರ ಆಶ್ರಯ ಸಮಿತಿ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 1-30 ಗಂಟೆಗೆ ಕಮಲಾಪುರ ಬೆಳಕೋಟಾ ಪುನರ್ವಸತಿ ಕೇಂದ್ರ ಇಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಅಶ್ವಾರೂಢ ಮೂರ್ತಿ ಅನಾವರಣಗೊಳಿಸುವರು.ನಂತರ ಮಧ್ಯಾಹ್ನ 3 ಗಂಟೆಗೆ ಯಾದಗಿರಿಯಿಂದ ಕಲ್ಬುರ್ಗಿಗೆ ಪ್ರಯಾಣ ಬೆಳೆಸುವರು.