ಜಿಲ್ಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರವಾಸ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಲೋಕೋಪಯೋಗಿ ಖಾತೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಇದೇ ಜನವರಿ 6 ರಂದು ಮಧ್ಯಾಹ್ನ 12 ಗಂಟೆಗೆ ಯಾದಗಿರಿ ಜಿಲ್ಲೆಯ ಸೈದಾಪುರ ಗ್ರಾಮದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸುವರು. ನಂತರ ಮಧ್ಯಾಹ್ನ 3 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡುವರು.

ಅಂದು ಸಂಜೆ 4 ಗಂಟೆಗೆ ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಲೋಕೋಪಯೋಗಿ ವಿಭಾಗದ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ, ರಾತ್ರಿ 7 ಕ್ಕೆ ಸೇಡಂ ಗೆ ಪ್ರಯಾಣ ಬೆಳೆಸುವರು.