ಮಡಿವಾಳ ಮಾಚಿದೇವರ ಜಯಂತಿ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಮಡಿವಾಳ ಮಾಚಿದೇವ ರ ಜಯಂತಿಯನ್ನು   ಬರುವ ಫೆಬ್ರುವರಿ  1 ರಂದು ಜಿಲ್ಲಾಡಳಿತದವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪಕೋಟೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಶ್ರೀ ಶರಣಬಸಪ್ಪ ಕೋಟೆಪ್ಪಗೊಳ ಅವರು, ಅಂದು ಬೆಳಿಗ್ಗೆ 11- 30 ಗಂಟೆಗೆ ನಗರದ  ಸರ್ಕಾರಿ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ  ಈ ಕಾರ್ಯಕ್ರಮ ನಡೆಯಲಿದ್ದು, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು, ವೇದಿಕೆ, ಆಹ್ವಾನ ಪತ್ರಿಕೆ ಸೇರಿದಂತೆ ಇನ್ನಿತರ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅದರಂತೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳಲ್ಲಿ, ಕಚೇರಿಗಳಲ್ಲಿ ಈ   ಜಯಂತಿ ಆಚರಿಸಲು ಹಾಗೂ  ತಾಲೂಕು ಮಟ್ಟದಲ್ಲಿ,  ಈ   ಜಯಂತಿ ಆಚರಣೆಗೆ ಸಕಲ ಕ್ರಮಗಳನ್ನು ಕೈಗೊಳ್ಳಬೇಕು, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ ಮಾಡಲು ಹಾಗೂ ನುರಿತ ಉಪನ್ಯಾಸಕರನ್ನು ಜಿಲ್ಲಾಮಟ್ಟದಲ್ಲಿ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಬೇಕು. ಜಿಲ್ಲೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಯಾ ಸಮಾಜದ ಮುಖಂಡರು, ಸಂಘ ಸಂಸ್ಥೆಗಳವರು ತಪ್ಪದೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಸಲಹೆ ನೀಡಿದರು.

ಸಭೆಯಲ್ಲಿ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ಸಮಾಜದ ಮುಖಂಡರಾದ  ಮಡಿವಾಳ ಮಾಚಿದೇವ  ಜಿಲ್ಲಾ ಸಂಘದ ಅಧ್ಯಕ್ಷ ಮಡಿವಾಳಪ್ಪ ಬಿಜಾಸ್ಪುರ, ತಾಲೂಕ ಅಧ್ಯಕ್ಷ ಶರಣು ಮಡಿವಾಳ, ರುದ್ರಲಿಂಗ ಮಡಿವಾಳ, ಮಲ್ಲಣ್ಣ.ಬಿ, ಚನ್ನಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.