ಹೆಣ್ಣು ಮಕ್ಕಳನ್ನು ಗೌರವಿಸಿ, ಪೋಷಿಸಿ, ಸಮಾನತೆಯನ್ನು ಕಾಪಾಡಿಕೊಳ್ಳಬೇಕು

By admin

ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ

ಹೆಣ್ಣು ಮಕ್ಕಳನ್ನು ಗೌರವಿಸಿ, ಪೋಷಿಸಿ, ಸಮಾನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ (ಪ್ರಭಾರ) ಶ್ರೀ ಲವೀಶ್ ಒರಡಿಯಾ ಅವರು ಹೇಳಿದರು.

ಯಾದಗಿರಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಹೆಣ್ಣು ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ.. ಹೆಣ್ಣು ಸಮಾಜದ ಕಣ್ಣು. ಹೆಣ್ಣು ಮಕ್ಕಳ ಸಾಧನೆ-ಸವಾಲುಗಳನ್ನು ಚರ್ಚೆ ಮಾಡುವ ಪ್ರಮುಖ ದಿನಗಳಲ್ಲಿ ಜನವರಿ 24 ಸಹ ಒಂದು. ಇಂದು ರಾಷ್ಟಿçÃಯ ಹೆಣ್ಣು ಮಕ್ಕಳ ದಿನ. ಭಾರತದಲ್ಲಿ ಹೆಣ್ಣು ಮಕ್ಕಳು ಎದುರಿಸುವ ಸವಾಲುಗಳು ಹಾಗೂ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವುದು. ಹೆಣ್ಣು ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಸೇರಿದಂತೆ ಹಲವು ಪ್ರಮುಖ ವಿಷಯಗಳಿಗೆ ಈ ದಿನವನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಮಹೇಶ್ ಬಿರಾದಾರ ಅವರು ಮಾತನಾಡಿದರು. ಹೆಣ್ಣು ಮಕ್ಕಳು ದೇಶದಲ್ಲಿ ಲಿಂಗಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವುದು, ಶಾಲೆಯಿಂದ ಹೆಣ್ಣು ಮಕ್ಕಳು ಹೊರಗೆ ಉಳಿಯುವುದನ್ನು ತಡೆಯುವುದು, ಬಾಲ್ಯ ವಿವಾಹ ತಡೆ ಹಾಗೂ ಲಿಂಗ ಆಧಾರಿತ ಹಿಂಸಾಚಾರವನ್ನು ತಡೆಯುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಜಾಗೃತಿ ಹಾಗೂ ಕಾನೂನು ಪರಿಚಯಿಸುವ ಉದ್ದೇಶದಿಂದ ದೇಶದಲ್ಲಿ ರಾಷ್ಟಿçÃಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ಎಮ್.ಎಸ್. ಪಾಟೀಲ್ ಅವರು ಮಾತನಾಡಿ, ಹೆಣ್ಣು ಮಕ್ಕಳು ಶಿಕ್ಷಣ ಪಡೆದರೆ ಆ ದೇಶ ಬಲಶಾಲಿ ಹಾಗೂ ಶ್ರೀಮಂತವಾಗುತ್ತದೆ. ಪ್ರತಿ ಹೆಣ್ಣು ಮಗುವಿಗೂ ಉತ್ತಮ ಶಿಕ್ಷಣ ನೀಡಿ ಅವರು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ದಾರಿದೀಪವಾಗಿ. ಹೆಣ್ಣು ಮಕ್ಕಳು ನಾಳಿನ ನಿಜವಾದ ಬದಲಾವಣೆಗಳನ್ನು ತರಬಲ್ಲರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಆಧಿಕಾರಿಗಳಾದ ಡಾ.ಮಲ್ಲಪ್ಪ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳಾದ ಡಾ.ಸಾಜಿದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀ ತುಳಸಿ ರಾಮ ಚವ್ಹಾಣ,  ಅಧಿಕ್ಷಕರಾದ ಶ್ರೀಮತಿಜ್ಯೋತಿ, ಡಿ.ಎನ್.ಓ ರತ್ನಮ್ಮ, ಶ್ರೀ ಮತಿ ಸಹನಾ, ಡಾ.ಸುನಿತಾ, ಶ್ರೀಮತಿ ಸೋನಮ್ಮ, ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಭಂದಿಗಳು ಉಪಸ್ಥಿತರಿದ್ದರು.