
ಸೆಕ್ಯುಲರ್ ವಾಯ್ಸ್ ನ್ಯೂಸ್ ಯಾದಗಿರಿ
ಅಪಘಾತ ರಹಿತ ಸಮಾಜ ನಮ್ಮ ಅದ್ಯೆತೆ ಅಪಘಾತಗಳ ತಡೆಯುವ ನಿಟ್ಟಿನಲ್ಲಿ ಯಾವ ಕ್ರಮಗಳು ಕೈಗೊಳ್ಳಬೇಕು ಎಂದು ಯಾದಗಿರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀ ಮಿಲಿಂದ ಕುಮಾರ ಅವರು ಹೇಳಿದರು.
ಯಾದಗಿರಿ ನಗರದ ಜ.28 ರಂದು ನಿಮಿತ್ಯ ಅಂಗವಾಗಿ ಜಿಲ್ಲಾ ಪೊಲೀಸ್ ಸಂಯುಕ್ತಾಶ್ರಯದಲ್ಲಿ 36 ರಾಷ್ಟಿಯ ರಸ್ತೆ ಸುರಕ್ಷತಾ ಮಸಚಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲಾ 50ಕ್ಕೂ ಅಧಿಕ ಪೊಲೀಸ್ ಇಲಾಖೆಯ ವಾಹನ ಚಾಲಕರಿಗೆ ವಾಹನ ಚಲಾಯಿಸುವ ಕೌಶಲ್ಯ ಹಾಗೂ ಚಾಲನಾ ಪತ್ರದ ಅವಶ್ಯಕತೆ ಹಾಗೂ ಪ್ರಥಮ ಚಿಕಿತ್ಸೆ ಮಾಡುವುದರ ಅರಿವು ಮೂಡಿಸಿದರು. ರಸ್ತೆಯಲ್ಲಿ ಸಂಭವಿಸುವ ಅಪಘಾತಗಳ ಬಗ್ಗೆ ಹಾಗೂ ಅಪಘಾತಗಳ ತಡೆಯುವ ನಿಟ್ಟಿನಲ್ಲಿ ಯಾವ ಕ್ರಮಗಳು ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾ ವರಿಷ್ಠಾಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
