ಕೂಲಿ ಕಾರ್ಮಿಕರು ನರೇಗಾ ಲಾಭ ಪಡೆದುಕೊಳ್ಳಿ 

By admin
ಶಹಪುರ : ಭಾರತ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ವಾಸವಿರುವ ಕೂಲಿ ಕಾರ್ಮಿಕರಿಗೆ, ಭದ್ರತೆ ಹೆಚ್ಚಿಸುವುದುಕ್ಕೋಸ್ಕರ ಮಹಾತ್ಮ ಗಾಂಧಿ ನರೇಗಾ ಯೋಜನೆ ಜಾರಿಗೆ ತಂದಿದೆ, ಆದ್ದರಿಂದ ಪ್ರತಿಯೊಬ್ಬರೂ ಕೂಲಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಾಯಿಬಾಬಾ ಹೇಳಿದರು.
ತಾಲೂಕಿನ ಸಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಕಾಲುವೆ,ನಾಲಾ,ಹಳ್ಳ, ಹೂಳೆತ್ತುವದು ಸೇರಿದಂತೆ ಜಾಲಿ ಮುಳ್ಳು,ಕಂಠಿಗಳು ಕಡೆದು ಸ್ವಚ್ಛತಾ ಕಾಮಗಾರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಲಾಯಿತು, ನರೇಗಾ ಕಾಮಗಾರಿಯಲ್ಲಿ ಮಹಿಳಾ ಕೂಲಿ ಕಾರ್ಮಿಕರು ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸಿ ನರೇಗಾ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಜೊತೆಗೆ ಅಕ್ಕಪಕ್ಕದ ಮನೆಯ ಮಹಿಳೆಯರಿಗೂ ತಿಳಿಸಿರಿ ದಿನಕ್ಕೆ 370 ರೂಪಾಯಿಗಳು ನರೇಗಾದಲ್ಲಿ ನೀಡುತ್ತಿದ್ದು, ಇದರ ಲಾಭ ಪಡೆದುಕೊಳ್ಳಬೇಕು ಎಂದು ನೋಡಿದರು, ಸಂದರ್ಭದಲ್ಲಿ ಹಲವಾರು ಮಹಿಳಾ ಕೂಲಿ ಕಾರ್ಮಿಕರು ಪುರುಷ ಕೂಡಿ ಕಾರ್ಮಿಕರು ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.